Menu

ನಟ ಪುನೀತ್ ರಾಜ್‌ಕುಮಾರ್‌ ಅವರ 50ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಅಭಿಮಾನಿಗಳು

ಕನ್ನಡ ಚಿತ್ರಪ್ರೇಮಿಗಳ ನೆಚ್ಚಿನ ನಟ ಪುನೀತ್ ರಾಜ್‌ಕುಮಾರ್‌ ಅವರ 50ನೇ ವರ್ಷದ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಂಬ್ರಮದಿಂದ ಆಚರಿಸುತ್ತಿದ್ದಾರೆ. ಪುನೀತ್‌ ಇಂದು ಜೊತೆಗಿರದ ಜೀವ ಆಗಿದ್ದರೂ ಅಭಿಮಾನಿಗಳ ಪ್ರೀತಿ, ವಿಶ್ವಾಸ, ಹುಟ್ಟುಹಬ್ಬ ಆಚರಿಸುವ ಉತ್ಸಾಹ ಹೆಚ್ಚುತ್ತಲೇ ಇದೆ. ಅಭಿಮಾನಿಗಳು ರಾತ್ರಿಯಿಂದಲೇ ಕಂಠೀರವ ಸ್ಟುಡಿಯೋದಲ್ಲಿರುವ ಅವರ ಸಮಾಧಿ ಬಳಿ ಹುಟ್ಟುಹಬ್ಬ ಆಚರಣೆಯಲ್ಲಿ ತೊಡಗಿದ್ದಾರೆ. ಅವರ 50ನೇ ವರ್ಷದ ಹುಟ್ಟುಹಬ್ಬವನ್ನ ಅಭಿಮಾನಿಗಳು ಅದ್ಧೂರಿಯಾಗಿ ಆಚರಿಸುತ್ತಿದ್ದಾರೆ. ಅಪ್ಪು ಸಮಾಧಿ ಬಳಿ ಜಾತ್ರೆಯ ವಾತಾವರಣ ನಿರ್ಮಾಣವಾಗಿದೆ. ಕಂಠೀರವ