Menu

ಗೀತಾ ಶಿವರಾಜ್‌ ಕುಮಾರ್‌ಗೆ ಸರ್ಜರಿ

ನಟ ಶಿವರಾಜ್‌ ಕುಮಾರ್‌ ಅವರ ಪತ್ನಿ ಗೀತಾ ಅವರಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಕತ್ತಿನ ಭಾಗದಲ್ಲಿ ಶಸ್ತ್ರಚಿಕಿತ್ಸೆ ಆಗಿದೆ ಎಂದು ಮೂಲಗಳು ತಿಳಿಸಿವೆ. ಈ ಬಗ್ಗೆ ಕುಟುಂಬದಿಂದ ಅಧಿಕೃತ ಮಾಹಿತಿ ಇನ್ನೂ ಲಭಿಸಿಲ್ಲ. ಶಿವರಾಜ್​ಕುಮಾರ್ ಅವರು ಇತ್ತೀಚೆಗಷ್ಟೇ ಕ್ಯಾನ್ಸರ್ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. ಗೀತಾ ಶಿವರಾಜ್​ಕುಮಾರ್ ಅವರಿಗೆ ನರದ ಸಮಸ್ಯೆಯಿಂದ ಕತ್ತಿನ ಭಾಗದಲ್ಲಿ ನೋವು ಕಾಣಿಸಿಕೊಂಡಿತ್ತು. ಈ ಮೊದಲೇ ಅವರು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಬೇಕಿತ್ತು.