Actressʼs private video
ನಟಿಯ ಖಾಸಗಿ ವೀಡಿಯೊ ವೈರಲ್ ಬೆದರಿಕೆಯೊಡ್ಡಿ ಹಣಕ್ಕೆ ಬೇಡಿಕೆ
ರಿಯಾಲಿಟಿ ಶೋದಲ್ಲಿ ಗುರುತಿಸಿಕೊಂಡಿರುವ ನಟಿಯೊಬ್ಬರ ಖಾಸಗಿ ವೀಡಿಯೊ ಚಿತ್ರೀಕರಿಸಿ, ಹಣಕ್ಕಾಗಿ ಬೇಡಿಕೆಯಿಟ್ಟು ಬ್ಲ್ಯಾಕ್‌ಮೇಲ್ ಮಾಡುತ್ತಿರುವ ಪ್ರಕರಣ ಬೆಂಗಳೂರು ನಗರದಲ್ಲಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಕೋರಮಂಗಲ ಇಂಡೋರ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ‘ಮಹಿಳಾ ಸೆಲೆಬ್ರೆಟಿ ಕ್ರಿಕೆಟ್ ಟೂರ್ನಿ’ ಆಯೋಜಿಸಲಾಗಿತ್ತು. ಈ ಟೂರ್ನಿಯಲ್ಲಿ ಭಾಗವಹಿಸಿದ್ದ ನಟಿಯೊಬ್ಬರು ಬಾತ್‌ರೂಮ್‌ಗೆ ಹೋಗಿದ್ದಾಗ ಅಪರಿಚಿತನೊಬ್ಬ ಗುಪ್ತವಾಗಿ ಖಾಸಗಿ ದೃಶ್ಯಗಳನ್ನು ವೀಡಿಯೊ ರೆಕಾರ್ಡ್ ಮಾಡಿದ್ದಾನೆ. ಅತ್ಯಂತ ವ್ಯವಸ್ಥಿತವಾಗಿ ನಟಿಯ ಗಮನಕ್ಕೆ ಬಾರದಂತೆ ವೀಡಿಯೊ ರೆಕಾರ್ಡ್ ಮಾಡಲಾಗಿದೆ. ನಾಲ್ಕೈದು ವೀಡಿಯೊಗಳನ್ನು ಆರೋಪಿಯು


