Thursday, February 06, 2025
Menu

ಕೊಟ್ಟಿಗೆಯಿಂದ ಕರು ಕದ್ದು ಬಾಡೂಟ ಮಾಡಿದವರ ಬಂಧನ

ಹಾಸನದ ಆಲೂರು ತಾಲೂಕಿನ ಹೆದ್ದುರ್ಗ ಗ್ರಾಮದಲ್ಲಿ ಕೊಟ್ಟಿಗೆಯಿಂದ ಕರುವೊಂದನ್ನು ದುಷ್ಕರ್ಮಿಗಳು ಕದ್ದು ಬಾಡೂಟ ಮಾಡಿದ್ದು, ಈ ಸಂಬಂಧ 7 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಗ್ರಾಮದ ಹೂವಣ್ಣ ಎಂಬವರಿಗೆ ಸೇರಿದ್ದ ಕರುವನ್ನು ದುಷ್ಕರ್ಮಿಗಳು ಹೊತ್ತೊಯ್ದು ಕಡಿದು ಮಾಂಸದೂಟ ಮಾಡಿದ್ದಾರೆ. ಕರುವಿಗಾಗಿ ಹುಡುಕಾಟ ನಡೆಸಿದಾಗ ಮಡಬಲು ಗ್ರಾಮದ ರೈಲ್ವೆ ಗೇಟ್ ಸಮೀಪ ಕರುವಿನ ರುಂಡ ಪತ್ತೆಯಾಗಿತ್ತು. ಗ್ರಾಮದ ಅಜ್ಗರ್, ಕೌಶಿಕ್, ಮೋಹನ್, ಮನೋಜ್, ಚಂದನ್, ಪವನ್ ಮತ್ತು ಅಜಿತ್ ಬಂಧಿತ ಆರೋಪಿಗಳು.