Adi Chunchanagiri Mutt
ಕೆಯುಡಬ್ಲ್ಯೂಜೆಯಲ್ಲಿ ಶ್ರೀಬಾಲಗಂಗಾಧರನಾಥ ಸ್ವಾಮೀಜಿ ದತ್ತಿ ನಿಧಿ ಪ್ರಶಸ್ತಿ
ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದಲ್ಲಿ ಆದಿಚುಂಚನಗಿರಿ ಮಠದ ವತಿಯಿಂದ ದತ್ತಿ ನಿಧಿ ಪ್ರಶಸ್ತಿ ಸ್ಥಾಪಿಸಲು ಮಠದ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮೀಜಿಯವರು ಮುಂದಾಗಿದ್ದಾರೆ. ತುಮಕೂರಿನಲ್ಲಿ ನಡೆಯಲಿರುವ 39ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಆಹ್ವಾನ ಪತ್ರಿಕೆಯನ್ನು ನೀಡಲು ಆದಿಚುಂಚನಗಿರಿ ಮಠಕ್ಕೆ ಹೋಗಿದ್ದ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ (ಕೆಯುಡಬ್ಲ್ಯೂಜೆ) ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ಅವರ ಜೊತೆಗೆ ಈ ನಿಟ್ಟಿನಲ್ಲಿ ಚರ್ಚೆ ನಡೆಸಿ ತಮ್ಮ ಇಚ್ಛೆ ವ್ಯಕ್ತಪಡಿಸಿದ್ದಾರೆ. ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ