advance room book
ಮಂತ್ರಾಲಯದಲ್ಲಿ ಅಡ್ವಾನ್ಸ್ ರೂಂ ಬುಕ್ ಹೆಸರಿನಲ್ಲಿ ವಂಚನೆ ಜಾಲ
ಶ್ರೀ ಗುರು ರಾಘವೇಂದ್ರ ಸ್ವಾಮಿ ಸನ್ನಿಧಿ ಮಂತ್ರಾಲಯದಲ್ಲಿ ಅಡ್ವಾನ್ಸ್ ರೂಂ ಬುಕ್ ಮಾಡುವ ಭಕ್ತರನ್ನು ವಂಚಿಸುವ ಜಾಲವೊಂದು ಕಾರ್ಯಾಚರಿಸುತ್ತಿರುವುದು ಬಯಲಾಗಿದೆ. ಹೀಗಾಗಿ ಭಕ್ತರು ಈ ಬಗ್ಗೆ ಎಚ್ಚರಿಕೆ ವಹಿಸಬೇಕಿದೆ. ರೂಂ ಬುಕ್ಕಿಂಗ್, ಪ್ರಸಾದ, ವಿವಿಧ ಸೇವೆಗಳ ಸೌಲಭ್ಯ ಒದಗಿಸುವ ಹೆಸರಲ್ಲಿ ವಂಚಕರ ಜಾಲ ಭಕ್ತರಿಂದ ಹಣ ವಸೂಲಿ ಮಾಡುತ್ತಿದ್ದು, ಈ ಕುರಿತು ಮಂತ್ರಾಲಯ ರಾಯರ ಮಠದ ಆಡಳಿತ ಮಂಡಳಿ ಪ್ರಕಟಣೆ ಹೊರಡಿಸಿದೆ. ಮಂತ್ರಾಲಯ ಗುರು ರಾಘವೇಂದ್ರ ಸ್ವಾಮಿ ಮಠದ ಹೆಸರಿನಲ್ಲಿ