Menu

ಬೆಳೆ ಸಮೀಕ್ಷೆ ವ್ಯತ್ಯಾಸ, ಆಕ್ಷೇಪ ಸಲ್ಲಿಸಲು ರೈತರಿಗೆ ಅವಕಾಶ: ಕೃಷಿ ಸಚಿವ ಚಲುವರಾಯಸ್ವಾಮಿ

ಬೆಳಗಾವಿ, ಸುವರ್ಣ ವಿಧಾನಸೌಧ: ಕೃಷಿ ಜಮೀನುಗಳಲ್ಲಿ ಬೆಳೆ ಸಮೀಕ್ಷೆಯನ್ನು ಸ್ವತಃ ರೈತರೇ ಬೆಳೆ ಸಮೀಕ್ಷೆ ರೈತರ ಆ್ಯಪ್ ನಲ್ಲಿ ಬೆಳೆ ಮಾಹಿತಿ ನಮೂದಿಸಲು ಅವಕಾಶ ಕಲ್ಪಿಸಲಾಗಿದೆ. ಯಾವುದೇ ವ್ಯತ್ಯಾಸಗಳು ಕಂಡು ಬಂದಲ್ಲಿ ರೈತರು ನಿಗದಿತ ಸಮಯದಲ್ಲಿ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೃಷಿ ಸಚಿವ ಚಲುವರಾಯ ಸ್ವಾಮಿ ಅವರು ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಜಿ. ಎಚ್. ಶ್ರೀನಿವಾಸ್ ಅವರ ಪ್ರಶ್ನೆಗೆ ಸದನದಲ್ಲಿ ಉತ್ತರ ನೀಡಿದರು. ರಾಜ್ಯದ