agricultural college
ಕೃಷಿ ಕಾಲೇಜು ಸ್ಥಾಪನೆಯಿಂದ ರೂರಲ್ ಎಜುಕೇಶನ್ ಸೊಸೈಟಿ ಜಾಗ ಒತ್ತುವರಿ ಆತಂಕ ತಪ್ಪಿದೆ: ಡಿಕೆ ಶಿವಕುಮಾರ್
ನನಗೂ ಹಾಗೂ ಸಂಸ್ಥೆಯ ಅಧ್ಯಕ್ಷರಾದ ಶ್ರೀಕಂಠು ಅವರಿಗೆ ಸಂಸ್ಥೆಯ ಜಾಗ ಎಲ್ಲಿ ಒತ್ತುವರಿಯಾಗುತ್ತದೆಯೋ ಎನ್ನುವ ಆಂತಕವಿತ್ತು. ಈಗ ಸದರಿ ಜಾಗದಲ್ಲಿ ಕೃಷಿ ಕಾಲೇಜು ಸ್ಥಾಪನೆಯಾಗುತ್ತಿರುವುದು ಸಮಾಧಾನ ತಂದಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕನಕಪುರದ ಹಾರೋಹಳ್ಳಿಯ ಮರಳವಾಡಿಯಲ್ಲಿ ಸ್ಥಾಪನೆಯಾಗಿರುವ ನೂತನ ಕರಿಯಪ್ಪ ಕೃಷಿ ಮಹಾವಿದ್ಯಾಲಯದ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು. ರೂರಲ್ ಎಜುಕೇಶನ್ ಸೊಸೈಟಿ ಅವರು ನನ್ನನ್ನು ಸರಿಯಾಗಿ ಉಪಯೋಗಿಸಿಕೊಳ್ಳುತ್ತಾ ಇರಲಿಲ್ಲ. ಈ ಹಿಂದೆ ಡಿ.ಲಿಂಗೇಗೌಡರು, ಚನ್ನಬಸವೇಗೌಡರ ಕಾಲದಿಂದಲೂ ಈ