Menu

ನ್ಯಾಯಾಂಗ ಸ್ವಾತಂತ್ರ್ಯವನ್ನು ಸೂಕ್ಷ್ಮ ತಾಂತ್ರಿಕ ಅವಲಂಬನೆಯಿಂದಲೂ ಸಂರಕ್ಷಿಸಬೇಕಿದೆ: ಸಿಎಂ 

ನಮ್ಮ ಪ್ರಜಾಪ್ರಭುತ್ವದ ಮೂಲಾಧಾರವಾಗಿರುವ ನ್ಯಾಯಾಂಗ ಸ್ವಾತಂತ್ರ್ಯವನ್ನು ಬಾಹ್ಯ ಒತ್ತಡಗಳಿಂದ ಮಾತ್ರವಲ್ಲದೆ ಸೂಕ್ಷ್ಮ ತಾಂತ್ರಿಕ ಅವಲಂಬನೆಯಿಂದಲೂ ಸಂರಕ್ಷಿಸುವ ಹೊಣೆಗಾರಿಕೆ ನಮ್ಮ ಮೇಲಿದೆ. ಅಲ್ಗಾರಿದಮಿಕ್ ಪಕ್ಷಪಾತವು ಕಾನೂನಿನ ಮುಂದೆ ಸಮಾನತೆಯ ಖಾತರಿಯನ್ನು ಹಾಳುಮಾಡಬಹುದು. ಅಪಾರದರ್ಶಕ ವ್ಯವಸ್ಥೆಗಳು ನಮ್ಮ ನ್ಯಾಯಾಂಗ ವ್ಯವಸ್ಥೆಯ  ತಾರ್ಕಿಕ ನಿರ್ಧಾರಗಳ ಸಿದ್ಧಾಂತವನ್ನು ದುರ್ಬಲಗೊಳಿಸುವ ಆತಂಕವನ್ನು ಅಲ್ಲಗಳೆಯುವಂತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರಿನ ಜಿಕೆವಿಕೆಯ ಡಾ. ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಭಾಂಗಣದಲ್ಲಿ ನಡೆದ ನ್ಯಾಯಾಂಗ ಅಧಿಕಾರಿಗಳ 22ನೇ ದ್ವೈವಾರ್ಷಿಕ ರಾಜಮಟ್ಟದ ಸಮ್ಮೇಳನದಲ್ಲಿ