AICC President Mallikarjuna Kharge
ಕೆಪಿಸಿಸಿ ಕಚೇರಿ, ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಗಣರಾಜ್ಯೋತ್ಸವ ಧ್ವಜಾರೋಹಣ
ಕೆಪಿಸಿಸಿ ಕಚೇರಿಯಲ್ಲಿ 76ನೇ ಗಣರಾಜ್ಯೋತ್ಸವ ದಿನಾಚರಣೆ ಅಂಗವಾಗಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಭಾನುವಾರ ಧ್ವಜಾರೋಹಣ ನೆರವೇರಿಸಿದರು. ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷರು ಆದ ಡಿಸಿಎಂ ಡಿ ಕೆ ಶಿವಕುಮಾರ್, ಕಾರ್ಯಾಧ್ಯಕ್ಷ ಜಿ.ಸಿ. ಚಂದ್ರಶೇಖರ್, ವಿಧಾನ ಪರಿಷತ್ತಿನ ಮುಖ್ಯ ಸಚೇತಕ ಸಲೀಂ ಅಹ್ಮದ್ ಮತ್ತಿತರ ಮುಖಂಡರು ಉಪಸ್ಥಿತರಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಗಣರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೆರವೇರಿಸಿದರು. ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ