aicc
ಗಾಂಧೀಜಿ, ಅಂಬೇಡ್ಕರ್ ಸ್ಮರಣೆ ಹಾಗೂ ಸಂವಿಧಾನ ರಕ್ಷಣೆ ಮೂಲ ಉದ್ದೇಶ: ಡಿಸಿಎಂ ಶಿವಕುಮಾರ್
“ಗಾಂಧಿಜಿ ಹಾಗೂ ಅಂಬೇಡ್ಕರ್ ಅವರ ಸ್ಮರಣೆ ಹಾಗೂ ಸಂವಿಧಾನದ ರಕ್ಷಣೆಯ ಉದ್ದೇಶದಿಂದ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸಲಾಗುತ್ತಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸಮಾವೇಶದ ಪೂರ್ವಭಾವಿ ಸಭೆ ಹಾಗೂ ನಂತರ ನಡೆದ ಮಾಧ್ಯಮಗೋಷ್ಠಿಯಲ್ಲಿ ಶಿವಕುಮಾರ್ ಮಾತನಾಡಿ, ನಮ್ಮ ಜೈ ಬಾಪು, ಜೈ ಭೀಮ್ ಜೈ ಸಂವಿಧಾನ ಸಮಾವೇಶ ಇಡೀ ದೇಶಕ್ಕೆ ದೊಡ್ಡ ಸಂದೇಶ ರವಾನಿಸುವ ಸಮಾವೇಶವಾಗಿದೆ ಎಂದರು. ಮಹಾತ್ಮಾ ಗಾಂಧಿ ಕಾಂಗ್ರೆಸ್
ಬಾಯಿ ಮುಚ್ಚಿಕೊಂಡು ಕೆಲಸ ಮಾಡಿ: ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ
ಕಾಂಗ್ರೆಸ್ ಪಕ್ಷ ನೀಡಿರುವ ಕೆಲಸವನ್ನು ಬಾಯಿ ಮುಚ್ಚಿಕೊಂಡು ಮಾಡಿ. ಯಾವಾಗ ಏನು ಮಾಡಬೇಕು ಎಂಬುದು ಹೈಕಮಾಂಡ್ ಗೆ ಗೊತ್ತಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಾಕೀತು ಮಾಡಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನದ ಕುರಿತು ಕಾಂಗ್ರೆಸ್ ನಾಯಕರು ದಿನಕ್ಕೊಂದು ಹೇಳಿಕೆ ನೀಡುತ್ತಿರುವ