aiims
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಕೇಂದ್ರದಿಂದ ಮಲತಾಯಿ ಧೋರಣೆ: ಡಿಕೆ ಶಿವಕುಮಾರ್ ಆಕ್ರೋಶ
ಬೆಂಗಳೂರು: ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಸಂಬಂಧ ಕೇಂದ್ರ ಸರ್ಕಾರವು ಮಲತಾಯಿ ಧೋರಣೆ ತೋರುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಈ ವಿಚಾರವಾಗಿ ಮಾಧ್ಯಮಗಳನ್ನು ಉದ್ದೇಶಿಸಿಗುರುವಾರ ಮಾತನಾಡಿದ ಅವರು, ನಮ್ಮ ಸಂಸದರು ಕರ್ನಾಟಕ ರಾಜ್ಯದ ಸ್ವಾಭಿಮಾನ ಹಾಗೂ ಗೌರವ ಉಳಿಸಲು ಹೋರಾಟ ಮಾಡುತ್ತಿದ್ದಾರೆ. ಹತ್ತಾರು ವರ್ಷಗಳಿಂದ ರಾಯಚೂರಿನಲ್ಲಿ ಏಮ್ಸ್ ಆರಂಭಿಸಬೇಕು ಎಂದು ಪ್ರಸ್ತಾಪ ಮಾಡಲಾಗಿತ್ತು. ನಾನು ವೈದ್ಯಕೀಯ ಶಿಕ್ಷಣ ಸಚಿವನಾಗಿದ್ದಾಗಲೂ ಪ್ರಸ್ತಾವನೆ ಸಲ್ಲಿಸಲಾಗಿತ್ತು. ರಾಯಚೂರಿನಲ್ಲಿ