Menu

ಅಜಿತ್ ಪವಾರ್ ಸಾವು ಆಘಾತಕಾರಿ, ರಾಜಕಾರಣಿಗಳು ಎಚ್ಚರಿಕೆಯಿಂದ ಇರಬೇಕು: ಡಿಕೆ ಶಿವಕುಮಾರ್

“ಅಜಿತ್ ಪವಾರ್ ಅವರ ಸಾವು ಆಘಾತಕಾರಿ. ಅವರ ಸಾವಿನ ಸುದ್ದಿ ಕೇಳಿ ನನಗೂ ಗಾಬರಿಯಾಯಿತು. ರಾಜಕಾರಣಿಗಳಾದ ನಾವುಗಳು ಅತ್ಯಂತ ಎಚ್ಚರಿಕೆಯಿಂದ ಇರಬೇಕು. ಆಚೀಚೆ ಪ್ರಯಾಣ ಮಾಡುವಾಗ ಹುಷಾರಾಗಿ ಇರಬೇಕು. ಹೀಗೆ ಅನೇಕ ನಾಯಕರನ್ನು ನಾವು ಕಳೆದುಕೊಂಡಿದ್ದೇವೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಕಳವಳ ವ್ಯಕ್ತಪಡಿಸಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು. “ಅತ್ಯಂತ ಪ್ರಗತಿಪರ ಆಲೋಚನೆ ಹೊಂದಿದ್ದಂತಹ ನಾಯಕ ಅಜಿತ್ ಪವಾರ್ ಅವರು. ಎಲ್ಲಾ ಕೆಲಸಗಳಿಗೂ ಸಹಕಾರ ಕೊಡುತ್ತಿದ್ದಾರೆ