Air India flight
ಬಾಲಿಯಲ್ಲಿ ಜ್ವಾಲಾಮುಖಿ ಸ್ಫೋಟ: ಏರ್‌ಇಂಡಿಯಾ ವಿಮಾನ ದೆಹಲಿಗೆ ವಾಪಸ್
ಮೌಂಟ್ ಲೆವೊಟೊಬಿ ಲಕಿ-ಲಕಿಯಲ್ಲಿ ಜ್ವಾಲಾಮುಖಿಯ ದಟ್ಟ ಹೊಗೆಯು 10 ಕಿ.ಮೀ ಎತ್ತರ ವ್ಯಾಪಿಸಿದ್ದು, ಸುರಕ್ಷತೆಯ ದೃಷ್ಟಿಯಿಂದ ಬಾಲಿಗೆ ಹೊರಟಿದ್ದ ಏರ್ ಇಂಡಿಯಾದ ವಿಮಾನವನ್ನು ಹಿಂತಿರುಗಿಸಲಾಗಿದೆ. ಬಾಲಿಗೆ ತೆರಳುವ ಹಲವು ಅಂತಾರಾಷ್ಟ್ರೀಯ ವಿಮಾನಗಳು ರದ್ದಾಗಿವೆ. ಏರ್ ಇಂಡಿಯಾ ವಿಮಾನ ಬೆಳಗ್ಗೆ ದೆಹಲಿಯಿಂದ ಬಾಲಿಗೆ ಹೊರಟಿತ್ತು. ಜ್ವಾಲಾಮುಖಿ ಸ್ಫೋಟದ ಅಪಾಯ ಗಮನಿಸಿ ಮಾನವನ್ನು ಮಧ್ಯದಾರಿಯಲ್ಲೇ ದೆಹಲಿಗೆ ವಾಪಸ್ ಕರೆಸಲಾಯಿತು. ವಿಮಾನವು ದೆಹಲಿಯಲ್ಲಿ ಸುರಕ್ಷಿತವಾಗಿ ಇಳಿದಿದೆ ಎಂದು ಏರ್ ಇಂಡಿಯಾ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.
ತಾಂತ್ರಿಕ ದೋಷ: ಏರ್ ಇಂಡಿಯಾ ವಿಮಾನ ನವದೆಹಲಿ ಬದಲು ಹಾಂಗ್‌ಕಾಂಗ್‌ಗೆ ವಾಪಸ್
ನವದೆಹಲಿಯಲ್ಲಿ ಲ್ಯಾಂಡ್ ಆಗಬೇಕಿದ್ದ ಏರ್ ಇಂಡಿಯಾ ವಿಮಾನವನ್ನು ಮತ್ತೆ ಹಾಂಕಾಂಗ್‌ಗೆ ತಿರುಗಿಸಲಾಗಿದೆ. ತಾಂತ್ರಿಕ ದೋಷದಿಂದಾಗಿ ಈ ಕ್ರಮ ಕೈಗೊಂಡಿರುವುದಾಗಿ ಮೂಲಗಳು ತಿಳಿಸಿವೆ. ಬೋಯಿಂಗ್ 787-8 ಡ್ರೀಮ್‌ಲೈನರ್ AI 315 ವಿಮಾನವು ಹಾಂಕಾಂಗ್‌ನಿಂದ ದೆಹಲಿಗೆ ಹೊರಟಿತ್ತು. ವಿಮಾನ ಟ್ರ್ಯಾಕಿಂಗ್ ಸೈಟ್ ಫ್ಲೈಟ್ ರಾಡಾರ್
ವಿಮಾನ ದುರಂತದಲ್ಲಿ ನಾವು ರಾಜಕೀಯ ಮಾಡಲ್ಲ,ಅದು ಬಿಜೆಪಿ-ಜೆಡಿಎಸ್ ಕೆಲಸ: ಡಿಕೆ ಶಿವಕುಮಾರ್
ನಾವು ಅಹಮದಾಬಾದ್ ವಿಮಾನ ದುರಂತದ ಬಗ್ಗೆ ರಾಜಕೀಯ ಮಾಡೋದಿಲ್ಲ. ಹೆಣದ ಮೇಲೆ ರಾಜಕೀಯ ಮಾಡುವುದು ಏನಿದ್ದರೂ ಬಿಜೆಪಿ ಹಾಗೂ ಜೆಡಿಎಸ್ ಕೆಲಸ. ನಾವು ಅವರಂತೆ ನೀಚ ರಾಜಕೀಯ ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. ಸದಾಶಿವನಗರ ನಿವಾಸದ ಬಳಿ
Black Box: ಅಹ್ಮದಾಬಾದ್‌ನಲ್ಲಿ ಪತನಗೊಂಡ ವಿಮಾನದ 2ನೇ ಬ್ಲ್ಯಾಕ್ ಬಾಕ್ಸ್ ಪತ್ತೆ
ಅಹಮದಾಬಾದ್‌ನಲ್ಲಿ ಗುರುವಾರ ನಡೆದ ಏರ್ ಇಂಡಿಯಾ ವಿಮಾನ ಪತನ ಏಕೆ, ಹೇಗೆ ಎಂಬ ಬಗ್ಗೆ ಖಚಿತ ಮಾಹಿತಿ ನೀಡಬಲ್ಲ 2ನೇ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ. ವಿಮಾನದಲ್ಲಿದ್ದ 2 ಬ್ಲ್ಯಾಕ್ ಬಾಕ್ಸ್‌ಗಳಲ್ಲಿ ಫ್ಲೈಟ್ ಡೇಟಾ ರೆಕಾರ್ಡರ್ ಶುಕ್ರವಾರ ಪತ್ತೆಯಾಗಿದೆ. ʻಕಾಕ್‌ಪಿಟ್ ವಾಯ್ಸ್ ರೆಕಾರ್ಡರ್ʼ
Ahmedabad Air Crash: ಮೃತರಲ್ಲಿ 80 ಮಂದಿಯ ಗುರುತು ಡಿಎನ್‌ಎಯಿಂದ ಪತ್ತೆ
ಅಹಮದಾಬಾದ್‌ನಲ್ಲಿ ಗುರುವಾರ ನಡೆದ ಏರ್ ಇಂಡಿಯಾ ವಿಮಾನ ಪತನದಲ್ಲಿ ಮೃತಪಟ್ಟವರ ಡಿಎನ್‌ಎ ಪರೀಕ್ಷೆ ನಡೆಯುತ್ತಿದ್ದು, ಈವರೆಗೆ 80 ಜನರ ಡಿಎನ್‌ಎ ಮ್ಯಾಚ್ ಆಗಿದೆ. 33 ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ ಎಂದು ಇಲ್ಲಿನ ಸಿವಿಲ್ ಆಸ್ಪತ್ರೆಯ ಹೆಚ್ಚುವರಿ ಸೂಪರಿಂಟೆಂಡೆಂಟ್ ಡಾ. ರಜನೀಶ್ ಪಟೇಲ್
Ahmedabad Air Crash: ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ
ಅಹ್ಮದಾಬಾದ್‌ನಲ್ಲಿ ಏರ್ ಇಂಡಿಯಾ ವಿಮಾನ ದುರಂತ ನಡೆದ ಮೂರು ದಿನಗಳ ಬಳಿಕ ಗುಜರಾತ್‌ನ ಮಾಜಿ ಸಿಎಂ ವಿಜಯ್ ರೂಪಾನಿ ಅವರ ಮೃತದೇಹದ ಗುರುತು ಪತ್ತೆಯಾಗಿದೆ. ಅಪಘಾತ ಸ್ಥಳದಲ್ಲಿ ಪತ್ತೆಯಾದ ಮೃತದೇಹದೊಂದಿಗೆ ಡಿಎನ್‌ಎ ಮ್ಯಾಚ್ ಆಗಿದ್ದು, ಮೃತದೇಹ ಹಸ್ತಾಂತರ ತಯಾರಿ ಪ್ರಕ್ರಿಯೆ ಆರಂಭಗೊಂಡಿದೆ.
Ahmedabad Air Crash: ಇಂಡಿಯಾ ವಿಮಾನ ದುರಂತ-ಮೃತರ ಕುಟುಂಬಕ್ಕೆ ತಲಾ ಒಂದು ಕೋಟಿ ರೂ. ಪರಿಹಾರ ಪ್ರಕಟಿಸಿದ ಟಾಟಾ ಗ್ರೂಪ್
ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಟಾಟಾ ಗ್ರೂಪ್ ತಲಾ 1 ಕೋಟಿ ರೂ. ಪರಿಹಾರ ಪ್ರಕಟಿಸಿದೆ. ಲಂಡನ್‌ಗೆ ಹೊರಟಿದ್ದ 242 ಪ್ರಯಾಣಿಕರು ಮತ್ತು 12 ಮಂದಿ ಸಿಬ್ಬಂದಿ ಇದ್ದ ಏರ್ ಇಂಡಿಯಾ ವಿಮಾನ ಗುರುವಾರ ಮಧ್ಯಾಹ್ನ
Ahmedabad Air Crash: ಇಂಡಿಯಾ ವಿಮಾನ ದುರಂತ-ಮೃತಪಟ್ಟವರ ಸಂಖ್ಯೆ ಡಿಎನ್‌ಎ ಪರೀಕ್ಷೆ ಬಳಿಕ ಪ್ರಕಟ
ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತದಲ್ಲಿ ಮೃತಪಟ್ಟವರ ನಿಖರ ಸಂಖ್ಯೆ ಹೇಳಲು ಈಗ ಸಾಧ್ಯವಿಲ್ಲ. ಡಿಎನ್‌ಎ ಪರೀಕ್ಷೆಯ ಬಳಿಕವೇ ನಿಖರವಾದ ಸಾವಿನ ಸಂಖ್ಯೆ ತಿಳಿಯಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಈ ದುರಂತದಿಂದ ಆದ ಪ್ರಾಣಹಾನಿಗೆ
Ahmedabad Air Crash: ಇದೇ ವಿಮಾನದಲ್ಲಿದ್ದರು ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ
ಅಹಮದಾಬಾದ್ ವಿಮಾನ ನಿಲ್ದಾಣದಿಂದ ೨೪೨ ಪ್ರಯಾಣಿಕರನ್ನು ಹೊತ್ತೊಯ್ದು ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕಾಫ್ ಆದ ಕೆಲವೇ ಸಮಯದಲ್ಲಿ ಪತನಗೊಂಡಿದ್ದು, ಇದೇ ವಿಮಾನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಪ್ರಯಾಣಿಸುತ್ತಿದರು ಎಂದು ವರದಿಯಾಗಿದೆ. ವಿಜಯ್ ರೂಪಾನಿ ಹಾಗೂ ಅವರ
Ahmedabad Air Crash: ಅಹ್ಮದಾಬಾದ್‌ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ
ಅಹಮದಾಬಾದ್ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಟೇಕ್ ಆಫ್ ಆದ ಸ್ವಲ್ಪ ಸಮಯದಲ್ಲೇ ಅಪಘಾತಕ್ಕೀಡಾಗಿದೆ. ಬೋಯಿಂಗ್ 787-8 ಡ್ರೀಮ್‌ಲೈನರ್ ವಿಮಾನವು 242 ಪ್ರಯಾಣಿಕರನ್ನು ಹೊತ್ತೊಯ್ದಿತ್ತು. ಅಪಘಾತ ಸಂಭವಿಸಿದ ಪ್ರದೇಶದಿಂದ ದಟ್ಟವಾದ ಕಪ್ಪು ಹೊಗೆ ಚಿಮ್ಮುತ್ತಿದೆ. ಅಪಘಾತದ ನಂತರ