Menu

ಮಹಿಳೆಯರ ಸಾಮಾಜಿಕ ಪ್ರಜ್ಞೆ ಜಾಗೃತಗೊಳಿಸಿದ ಅಕ್ಕಮಹಾದೇವಿ

ಅಜಕೋಟಿ ಕಲ್ಪವರುಷದವರೆಲ್ಲರೂ ಹಿರಿಯರೇ? ಹುತ್ತೇರಿ ಬೆತ್ತ ಬೆಳೆದ ತಪಸ್ವಿಗಳೆಲ್ಲರೂ ಹಿರಿಯರೇ? ನಡು ಮುರಿದು ಗುಡುಗೂರಿ ತಲೆ ನಡುಗಿ ನೆರೆತೆರೆ ಹೆಚ್ಚಿ; ಮತಿಗೆಟ್ಟು ಒಂದನಾಡ ಹೋಗಿ ಒಂಬತ್ತನಾಡುವ ಅಜ್ಞಾನಿಗಳೆ ಲ್ಲರೂ ಹಿರಿಯರೇ? ಅನುವನರಿದು ಘನವ ಬೆರೆಸಿ ಹಿರಿದು ಕಿರಿದೆಂಬ ಭೇದವ ಮರೆದು ಕೂಡಲ ಚೆನ್ನಸಂಗಯ್ಯನಲ್ಲಿ ಬೆರೆಸಿ ಬೇರಿಲ್ಲದಿಪ್ಪ ಹಿರಿಯತನ ನಮ್ಮ ಮಹಾದೇವಿಯಕ್ಕಂಗಾಯಿತ್ತು. ಹನ್ನೆರಡನೆಯ ಶತಮಾನದ ಬಸವಾದಿ ಪ್ರಮಥರ ಕಾಲದ ಸಮಕಾಲೀನರು, ಜಾಗತಿಕ ಮಹಿಳೆಯರಿಗೆ ಸಾಮಾಜಿಕ ಪ್ರಜ್ಞೆಯನ್ನು ಜಾಗೃತಗೊಳಿಸಿ, ಸಮಾನತೆ ಸಾರಿದ ಧೀಮಂತ