Menu

ಮರದ ಕೊಂಬೆ ಬಿದ್ದು ಯುವಕ ಸಾವು: ಬಿಬಿಎಂಪಿ ಅರಣ್ಯಾಧಿಕಾರಿಗಳ ವಿರುದ್ಧ ಕೇಸ್‌

ಇತ್ತೀಚೆಗೆ ಮರದ ಕೊಂಬೆ ಬಿದ್ದು ಯುವಕ ಅಕ್ಷಯ್‌ ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ ಅರಣ್ಯಾಧಿಕಾರಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬೆನಕ್ ರಾಜ್ ಎಂಬವರು ಹನುಮಂತ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಬಿಬಿಎಂಪಿಯ ಆರ್‌ಎಫ್‌ಒ, ಎಸಿಎಫ್, ಡಿಎಫ್‌ಒ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಕ್ಷಯ್ ಮೃತಪಟ್ಟಿದ್ದಾನೆ, ಸಾವಿಗೆ ಕಾರಣವಾಗಿರುವ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಧಿಕಾರಿಗಳ ನಿರ್ಲಕ್ಷ್ಯದ ಆರೋಪದ ಮೇಲೆ ಎಫ್‌ಐಆರ್ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ ಯುವಕ ಅಕ್ಷಯ್‌ ಸಾವು

ಕೆಲವು ದಿನಗಳ ಹಿಂದೆ ಬೆಂಗಳೂರಿನಲ್ಲಿ ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಯುವಕ ಅಕ್ಷಯ್‌ ಮೃತಪಟ್ಟಿದ್ದಾರೆ. ಜೂನ್‌ 15ರಂದು ಬಸವನಗುಡಿಯಬ್ರಹ್ಮ ಚೈತನ್ಯ ಮಂದಿರದ ಬಳಿ ಮರದ ಕೊಂಬೆ ಬಿದ್ದು ಗಾಯಗೊಂಡಿದ್ದ 29 ವರ್ಷದ ಅಕ್ಷಯ್‌ಗೆ ವೈದ್ಯರು ಶಸ್ತ್ರ