Menu

ಮದ್ಯ ಸೇವಿಸಿ ಬಟ್ಟೆ ಬಿಚ್ಚಿ ರಸ್ತೆಯಲ್ಲೇ ಶ್ರೀ ಶಾಂತಲಿಂಗ ಶಿವಾಚಾರ್ಯರ ರಂಪಾಟ

ಅಫಜಲ್ಪುರ ತಾಲೂಕಿನ ಉಡಚಾಣ ಗ್ರಾಮದ ಶ್ರೀ ಶಾಂತಲಿಂಗ ಶಿವಾಚಾರ್ಯರು ಸಾರಾಯಿ ಕುಡಿದು ರಸ್ತೆಯಲ್ಲೇ ರಂಪಾಟ ಮಾಡಿದ್ದು, ಈ ನಡವಳಿಕೆಗಳಿಗೆ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಉಡಚಾಣ ಗ್ರಾಮದ ಶ್ರೀ ಶಂಕರಲಿಂಗೇಶ್ವರ ಸಂಸ್ಥಾನ ಹಿರೇಮಠದ ಮಠಾಧಿಪತಿ ಶ್ರೀ ಶಾಂತಲಿಂಗ ಶಿವಾಚಾರ್ಯರು ಇತ್ತೀಚೆಗೆ ಇಂಡಿ ತಾಲೂಕಿನ ಸಾಲೋಟಗಿ ಗ್ರಾಮದಲ್ಲಿ ಕಂಠ ಪೂರ್ತಿ ಮದ್ಯ ಸೇವಿಸಿ ರಸ್ತೆಯಲ್ಲಿ ಅಡ್ಡಾದಿಡ್ಡಿ ವಾಹನ ಚಲಾಯಿಸಿ ಅಪಘಾತ ನಡೆಸಿದ್ದರು. ಸಾರ್ವಜನಿಕರು ನೋಡಿ ತರಾಟೆಗೆ ತೆಗೆದುಕೊಂಡಿದ್ದಾರೆ. ಅರ್ಧ ಬಟ್ಟೆ ಬಿಚ್ಚಿಕೊಂಡು ಅಲೆದಾಡುತ್ತಿದ್ದ