Menu

ಸರ್ವ ಪಕ್ಷ ಸಭೆಗೆ ಮೋದಿ ಗೈರು: ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ

ನವದೆಹಲಿ: ಭಾರತೀಯ ಸೇನೆ ಕೈಗೊಂಡ ಆಪರೇಷನ್​ ಸಿಂಧೂರ ಕಾರ್ಯಾಚರಣೆ ಹಾಗೂ ಎಲ್​ಒಸಿಯಲ್ಲಿ ನಿರಂತರವಾಗಿ ಸಾಗುತ್ತಿರುವ ಗಡಿಯಾಚೆಗಿನ ದಾಳಿಗಳ ಕುರಿತು ಕೇಂದ್ರ ಸರ್ಕಾರ ಕರೆದಿದ್ದ ಸರ್ವ ಪಕ್ಷ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಗೈರಿನ ಕುರಿತು ಅಸಮಾಧಾನ ವ್ಯಕ್ತಪಡಿಸಿ ಮಾತನಾಡಿರುವ ಕಾಂಗ್ರೆಸ್​ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಸಂಸತ್ತಿಗಿಂತ ಮೇಲಿನವರಾ ಎಂದು ಪ್ರಶ್ನಿಸಿದ್ದಾರೆ. ಪಹಲ್ಗಾಮ್​ ಉಗ್ರರ ದಾಳಿಗೆ ಪ್ರತಿಯಾಗಿ ಬುಧವಾರ ನಸುಕಿನಲ್ಲಿ ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರರ ಅಡಗುತಾಣ ಗುರಿಯಾಗಿಸಿಕೊಂಡು