Menu

ಇಡಿ ವಿಚಾರಣೆಗೆ ಹಾಜರಾದ ನಿರ್ಮಾಪಕ ಅಲ್ಲು ಅರವಿಂದ್‌

ನಟ ಅಲ್ಲು ಅರ್ಜುನ್ ತಂದೆ, ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್‌ ಅವರನ್ನು ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿದೆ. ರಾಮಕೃಷ್ಣ ಎಲೆಕ್ಟ್ರಾನಿಕ್ಸ್ ಬ್ಯಾಂಕ್‌ನಿಂದ 101.4 ಕೋಟಿ ರೂ. ಸಾಲ ಪಡೆದು ವಂಚನೆ ಮಾಡಿದ ಪ್ರಕರಣದಲ್ಲಿ 3 ಗಂಟೆಗಳ ವಿಚಾರಣೆ ನಡೆಸಲಾಗಿದೆ. ಈ ಹಿಂದೆ ಅವರು ವಿಚಾರಣೆಗೆ ಹಾಜರಾಗಿದ್ದಾಗ ಪ್ರಮುಖ ಹಣಕಾಸಿನ ದಾಖಲೆಗಳನ್ನು ಸಲ್ಲಿಸಲು ವಿಫಲರಾಗಿದ್ದರು. ಮತ್ತೆ ವಿಚಾರಣೆಗೆ ಅಲ್ಲು ಅರವಿಂದ್ ಹಾಜರಾಗಿದ್ದು, ಮುಂದಿನ ವಾರ ಮತ್ತೆ ವಿಚಾರಣೆಗೆ ಬರುವಂತೆ ಇಡಿ ಸೂಚಿಸಿದೆ.

ಅಲ್ಲು ಅರ್ಜುನ್ ಗೆ ಷರತ್ತುಬದ್ಧ ಜಾಮೀನು ಮಂಜೂರು

ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಗೆ ಕಾಲ್ತುಳಿತ ಪ್ರಕರಣದಲ್ಲಿ ನಾಂಪಲ್ಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಈ ಮೂಲಕ ಅಲ್ಲು ಅರ್ಜುನ್ ಗೆ ಬಿಗ್ ರಿಲೀಫ್ ಸಿಕ್ಕಿದಂತಾಗಿದೆ. ಹೈದರಾಬಾದ್ ನ ಸಂಧ್ಯಾ ಥಿಯೇಟರ್ ಬಳಿ ಪುಷ್ಪ-2 ಚಿತ್ರದ ಬಿಡುಗಡೆ ವೇಳೆ