Menu

ಆಲಮಟ್ಟಿ ಡ್ಯಾಂ ಎತ್ತರ ಬಗ್ಗೆ ಮಹಾರಾಷ್ಟ್ರ ಸಿಎಂ ತಕರಾರು ಅಸಮಂಜಸ: ಬಸವರಾಜ ಬೊಮ್ಮಾಯಿ

ಮಹಾರಾಷ್ಟ್ರ ಸಿಎಂ ಆಲಮಟ್ಟಿ ಜಲಾಶಯದ ಎತ್ತರದ ಬಗ್ಗೆ ತಕರಾರು ಮಾಡಿರುವುದು ಅಸಮಂಜಸ ಮತ್ತು ರಾಜಕೀಯ ಪ್ರೇರಿತ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ ಅಡಿಯಲ್ಲಿ ನಿರ್ಮಾಣವಾಗಿರುವ ಆಲಮಟ್ಟಿ ಸಂಪೂರ್ಣ ಕೃಷ್ಣಾ ಜಲಾನಯನ ಪ್ರದೇಶದ ಒಂದು ಪ್ರಮುಖ ನೀರು ಸಂಗ್ರಹ ಮತ್ತು ವಿತರಣೆಯ ವಾಟರ್ ಗ್ರಿಡ್ ಆಗಿದೆ. ಉತ್ತರ ಕರ್ನಾಟಕದ ಜೀವನದಿಗೆ ಹೃದಯ ಭಾಗವಾಗಿದೆ. ಆಲಮಟ್ಟಿ