Menu

ಭಾರತದ ಚುನಾವಣೆಗೆ ಅಮೆರಿಕ ಹಣ ನೀಡಿಲ್ಲ, ಯೋಜನೆಗಳಿಗೆ ಅನುದಾನ ನೀಡಿದೆ: ವಿತ್ತ ಸಚಿವಾಲಯ

ಪ್ರಧಾನಿ ನರೇಂದ್ರ ಮೋದಿ ಅವರಿಗೆ 180 ಕೋಟಿ ರೂ. ಚುನಾವಣಾ ಅನುದಾನವನ್ನು ಅಮೆರಿಕ ನೀಡಿತ್ತು, ಭಾರತದ ಚುನಾವಣೆ ಮೇಲೆ ಪ್ರಭಾವ ಬೀರಲು ಅಮೆರಿಕ ʻಯುಎಸ್‌ಏಡ್‌ʼ ಮೂಲಕ ನೀಡಿದೆ ಎಂಬ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆ ವಿವಾದ ಸೃಷ್ಟಿಸಿದ ಬೆನ್ನಲ್ಲೇ ಭಾರತದ ಹಣಕಾಸು ಸಚಿವಾಲಯ ಸ್ಪಷ್ಟನೆ ನೀಡಿದೆ. 2023-24ನೇ ಸಾಲಿನಲ್ಲಿ ಮತದಾನ ಪ್ರಮಾಣ ಹೆಚ್ಚಳ ಉದ್ದೇಶಕ್ಕೆ ಅಮೆರಿಕದಿಂದ ಯಾವುದೇ ಹಣಕಾಸು ನೆರವು ಬಂದಿಲ್ಲ ಎಂದು ಕೇಂದ್ರ ಹಣಕಾಸು ಸಚಿವಾಲಯ ಪ್ರಕಟಿಸಿರುವ ವರದಿಯಲ್ಲಿ