Menu

ಆಂಧ್ರದಲ್ಲಿ ಬೆಂಗಳೂರು ಉದ್ಯಮಿಗಳ ಹತ್ಯೆ: ತನಿಖೆಗೆ ಬಿಜೆಪಿ ಮುಖಂಡರ ಆಗ್ರಹ

ಆಂಧ್ರಪ್ರದೇಶದಲ್ಲಿ ಬಾಪಟ್ಲ ಜಿಲ್ಲೆಯಲ್ಲಿ ಬೆಂಗಳೂರಿನ ಉದ್ಯಮಿಗಳಾದ ತಂದೆ-ಮಗ ಕೆ.ವಿ.ಪ್ರಶಾಂತ್ ರೆಡ್ಡಿ ಹಾಗೂ ವೀರಸ್ವಾಮಿರೆಡ್ಡಿಯ ಕೊಲೆಗೆ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಮತ್ತು ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಸಂತಾಪ ವ್ಯಕ್ತಪಡಿಸಿದ್ದು, ಶೀಘ್ರ ಸೂಕ್ತ ತನಿಖೆಗೆ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಆಂಧ್ರದಲ್ಲಿ ರಾಜ್ಯದ ಇಬ್ಬರು ಬಿಜೆಪಿ ಕಾರ್ಯಕರ್ತರ ಹತ್ಯೆಯನ್ನು ಖಂಡಿಸಿದ್ದು, ಶೀಘ್ರವೇ ತನಿಖೆಯಾಗಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಕಾರ್ಯಕರ್ತರಾಗಿದ್ದ

ದೇವನಹಳ್ಳಿ ಭೂ ಸ್ವಾಧೀನ ರದ್ದು: ಏರೋಸ್ಪೇಸ್ ಉದ್ಯಮಿಗಳಿಗೆ ಆಂಧ್ರ ಸಚಿವ ನಾರಾ ಲೋಕೇಶ್ ಆಹ್ವಾನ

ಭೂಸ್ವಾಧೀನ ವಿರೋಧಿಸಿ ರೈತರು ಮಾಡಿದ ಆಗ್ರಹವನ್ನು ಗೌರವಿಸಿದ ಕರ್ನಾಟಕ ರಾಜ್ಯ ಸರ್ಕಾರವು ದೇವನಹಳ್ಳಿಯ ಚನ್ನರಾಯಪಟ್ಟಣ  ಭೂಸ್ವಾಧೀನ ಪ್ರಕ್ರಿಯೆಯನ್ನು ರದ್ದುಗೊಳಿಸಿರುವ ಬೆನ್ನಲ್ಲೇ ಏರೋಸ್ಪೇಸ್ ಉದ್ಯಮಿಗಳಿಗೆ ಆಂಧ್ರ ಸಿಎಂ ಪುತ್ರ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವ ನಾರಾ ಲೋಕೇಶ್ ಬಹಿರಂಗ ಆಹ್ವಾನ ನೀಡಿದ್ದಾರೆ.

ಆಂಧ್ರದಲ್ಲಿ ಮದ್ಯ ದರ ಭಾರಿ ಇಳಿಕೆ

ರಾಜ್ಯದಲ್ಲಿ ಅಬಕಾರಿ ತೆರಿಗೆ ಸಂಗ್ರಹಕ್ಕೆ ಮದ್ಯದ ದರ ಏರಿಕೆ ಮಾಡುತ್ತಿದ್ದರೆ ಆಂಧ್ರಪ್ರದೇಶದಲ್ಲಿ ಚಂದ್ರಬಾಬು ನಾಯ್ಡು ನೇತೃತ್ವದ ಸರ್ಕಾರವು ಇದೇ ಮೊದಲ ಬಾರಿ ಮದ್ಯದ ದರ ಇಳಿಸಿದ್ದು, ಪ್ರತಿ ಬಾಟಲ್‌ಗೆ 10 ರೂಪಾಯಿಯಿಂದ 100 ರೂ.ವರೆಗೆ ಕಡಿತಗೊಳಿಸಿದೆ. ಈ ಕ್ರಮದಿಂದ ಆ ರಾಜ್ಯದಲ್ಲಿ

ಆಂಧ್ರಪ್ರದೇಶದಲ್ಲಿ ಶೀಘ್ರ ಹೊಸ ಜನಸಂಖ್ಯಾ ನೀತಿ: ಚಂದ್ರಬಾಬು ನಾಯ್ಡು

ಆಂಧ್ರಪ್ರದೇಶದಲ್ಲಿ ಜನಸಂಖ್ಯಾ ಕುಸಿತ, ತಗ್ಗಿರುವ ಫಲವತ್ತತೆ ದರ ಮತ್ತು ಜನಸಂಖ್ಯಾ ಅಸಮತೋಲನದ ಸಮಸ್ಯೆಗಳನ್ನು ನಿಭಾಯಿಸಲು ರಾಜ್ಯ ಸರ್ಕಾರವು ಶೀಘ್ರದಲ್ಲೇ ಹೊಸ ನೀತಿಯನ್ನು ರೂಪಿಸಲಿದೆ ಎಂದು ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಘೋಷಿಸಿದ್ದಾರೆ. ಜನಸಂಖ್ಯೆಯನ್ನು ಆರ್ಥಿಕ ಶಕ್ತಿಯಾಗಿ ಪರಿವರ್ತಿಸುವುದು ಮತ್ತು ರಾಜ್ಯದ ಆರ್ಥಿಕ

Accident Deaths: ತಿರುಪತಿಯಿಂದ ಬರುತ್ತಿದ್ದಾಗ ಆಂಧ್ರಪ್ರದೇಶದಲ್ಲಿ ಅಪಘಾತ: ಮೂವರು ಕನ್ನಡಿಗರು ಬಲಿ

ತಿರುಪತಿ ಯಾತ್ರೆ ಮುಗಿಸಿಕೊಂಡು ವಾಪಸಾಗುತ್ತಿದ್ದಾಗ ಟಿಟಿ ವಾಹನ ಆಂಧ್ರಪ್ರದೇಶದ ಅನ್ನಮಯ್ಯ ಜಿಲ್ಲೆಯ ಮದನಪಲ್ಲಿ ತಾಲೂಕಿನ ಕುರುಬಲಕೋಟ ಮಂಡಲದ ಚೆನ್ನಾಮರ್ರಿಮಿಟ್ಟ ಬಳಿ ಅಪಘಾತಗೊಂಡು ಮೂವರು ಕನ್ನಡಿಗರು ಮೃತಪಟ್ಟಿದ್ದಾರೆ. ತಿರುಪತಿಯಿಂದ ಮರಳುತ್ತಿದ್ದ ಟಿಟಿ ವಾಹನಕ್ಕೆ ಭಾರಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮವಾಗಿ ಟಿಟಿ