Menu

ಪಟಾಕಿ ಕಾರ್ಖಾನೆಯಲ್ಲಿ ಅಗ್ನಿ ಅವಘಡ: 8 ಮಂದಿ ಸಾವು 7 ಮಂದಿಗೆ ಗಾಯ

ಅಮರಾವತಿ: ಪಟಾಕಿ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಇಬ್ಬರು ಮಹಿಳೆಯರು ಸೇರಿ 8 ಮಂದಿ ಸಾವನ್ನಪ್ಪಿ 7 ಮಂದಿ ಗಾಯಗೊಂಡಿರುವ ದಾರುಣ ಘಟನೆ ನಗರದ ಹೊರವಲಯದ ಅನಕಪಲ್ಲಿಯಲ್ಲಿ ನಡೆದಿದೆ. ಗಾಯಗೊಂಡಿರುವ 7 ಮಂದಿಯಲ್ಲಿ ನಾಲ್ಕೈದು ಮಂದಿಯ ಸ್ಥಿತಿ ಗಂಭೀರವಾಗಿದ್ದು,ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಯಿದೆ. ಬೆಂಕಿ ಅವಘಡದ ಕುರಿತು ಆಂಧ್ರ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ವಿಷಾದ ವ್ಯಕ್ತಪಡಿಸಿ ಮೃತರ ಸಾವಿಗೆ ಕಂಬನಿ‌ ಮಿಡಿದಿದ್ದಾರೆ. ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದಾರೆ