anekal girl
ಆಟವಾಡುತ್ತಿದ್ದ 11 ವರ್ಷದ ಬಾಲಕಿ ವಿದ್ಯುತ್ ಪ್ರವಹಿಸಿ ಸಾವು
ಬೆಂಗಳೂರು: ಆಟವಾಡುತ್ತಿದ್ದ 11 ವರ್ಷದ ಬಾಲಕಿ ವಿದ್ಯುತ್ ಶಾಕ್ ನಿಂದ ಮೃತಪಟ್ಟ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ನಾರಾಯಣಘಟ್ಟದಲ್ಲಿ ನಡೆದಿದೆ. ಸೂರ್ಯನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಂಗಳವಾರ ಈ ಘಟನೆ ನಡೆದಿದ್ದು, ನಾರಾಯಣಘಟ್ಟ ಗ್ರಾಮದ ತನಿಷ್ಕಾ (11) ಮೃತ ಬಾಲಕಿ. ಶಾಲೆಗೆ ರಜೆ ಇದ್ದ ಕಾರಣ ತನಿಷ್ಕಾ ಮನೆ ಬಳಿಯೇ ಆಟವಾಡುತ್ತಿದ್ದಳು. ವಿದ್ಯುತ್ ಕಂಬದ ಬಳಿ ಆಟವಾಡುತ್ತಿದ್ದಾಗ ಕರೆಂಟ್ ಶಾಕ್ ತಗುಲಿದೆ. ವಿದ್ಯುತ್ ಶಾಕ್‌ನಿಂದ ಗಾಯಗೊಂಡಿದ್ದ ತನಿಷ್ಕಾಳನ್ನ ಕೂಡಲೇ