Menu

ಜಾತಿ ನಿಂದನೆ: ಮೇಲ್ನೋಟಕ್ಕೆ ಅಪರಾಧ ಸಾಬೀತಾಗದಿದ್ದರಷ್ಟೇ ನಿರೀಕ್ಷಣಾ ಜಾಮೀನು ಎಂದ ಸುಪ್ರೀಂ

ಜಾತಿ ನಿಂದನೆ ಅಥವಾ ಎಸ್​ಸಿ/ಎಸ್​ಟಿ ಕಾಯ್ದೆಯಡಿ ಮೇಲ್ನೋಟಕ್ಕೆ ಅಪರಾಧ ಸಾಬೀತು ಆಗದಿದ್ದರೆ ಮಾತ್ರ ನಿರೀಕ್ಷಣಾ ಜಾಮೀನು ಮಂಜೂರು ಮಾಡಬಹುದು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಮಹಾರಾಷ್ಟ್ರದ ಜಾತಿ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಿದ್ದ ಬಾಂಬೆ ಹೈಕೋರ್ಟ್ ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿಗಳಾದ ಕೆ. ವಿನೋದ್ ಚಂದ್ರನ್ ಮತ್ತು ಎನ್.ವಿ. ಅಂಜಾರಿಯಾ ಅವರಿದ್ದ ನ್ಯಾಯಪೀಠವು ಈ ಆದೇಶ ಪ್ರಕಟಿಸಿದೆ.

ಬಿಎಸ್‌ವೈಗೆ ನಿರೀಕ್ಷಣಾ ಜಾಮೀನು, ಪೋಕ್ಸೋ ಪ್ರಕರಣ ರದ್ದು ಇಲ್ಲ: ಹೈಕೋರ್ಟ್‌

ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ನೀಡಿ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಧಾರವಾಡ ಹೈಕೋರ್ಟ್ ಪೀಠ ಆದೇಶ ಹೊರಡಿಸಿ ಪ್ರಕರಣ ರದ್ದು ಮಾಡಲು ನಿರಾಕರಿಸಿದೆ. ಇದರಿಂದ ಯಡಿಯೂರಪ್ಪಗೆ ತಾತ್ಕಾಲಿಕ ರಿಲೀಫ್ ಸಿಕ್ಕಿದೆ ಅಷ್ಟೇ. ಆದ್ರೆ ಕಷ್ಟ ತಪ್ಪಿಲ್ಲ.