Menu

ಪಹಲ್ಗಾಂ ದಾಳಿ ಬೆನ್ನಲ್ಲೇ ದೇಶದ ಶಸ್ತ್ರಾಸ್ತ್ರ ಕಾರ್ಖಾನೆಗಳಲ್ಲಿ ದೀರ್ಘ ರಜೆ ರದ್ದು

ಪಹಲ್ಗಾಮ್‌ನಲ್ಲಿ ಉಗ್ರರು ದಾಳಿ ನಡೆಸಿ 26 ಪ್ರವಾಸಿಗರನ್ನು ಹತ್ಯೆ ಮಾಡಿದ ಬಳಿಕ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಉದ್ವಿಗ್ನತೆ ತೀವ್ರಗೊಂಡಿದ್ದು, ಯುದ್ಧ ಭೀತಿ ಆವರಿಸಿರುವ ಮಧ್ಯೆಯೇ ದೇಶಾದ್ಯಂತ ಶಸ್ತ್ರಾಸ್ತ್ರ ಕಾರ್ಖಾನೆಗಳಿಗೆ ದೀರ್ಘ ರಜೆ ರದ್ದುಗೊಳಿಸಲಾಗಿದೆ. 12 ಶಸ್ತ್ರಾಸ್ತ್ರ ಕಾರ್ಖಾನೆಗಳ ಸಮೂಹವಾದ ಮುನಿಷನ್ಸ್ ಇಂಡಿಯಾ ಲಿಮಿಟೆಡ್ (ಎಂಐಎಲ್) ದೇಶದಲ್ಲಿರುವ ತನ್ನ ಹೆಚ್ಚಿನ ಸ್ಥಾವರಗಳಲ್ಲಿನ ಉದ್ಯೋಗಿಗಳ ದೀರ್ಘ ರಜೆಗಳನ್ನು ರದ್ದುಗೊಳಿಸಿದೆ ಎಂದು ಮೂಲಗಳು ತಿಳಿಸಿವೆ. ಇನ್ನು ಎರಡು ತಿಂಗಳವರೆಗೆ ಎರಡು ದಿನಗಳಿಗಿಂತ ಹೆಚ್ಚಿನ