Menu

ಸೇನೆ, ಯೋಧರಿಗಾಗಿ ಮಸೀದಿಗಳಲ್ಲೂ ಪ್ರಾರ್ಥನೆ: ಸಚಿವ ಜಮೀರ್‌ ಅಹ್ಮದ್‌

ಪಹಲ್ಗಾಂನಲ್ಲಿ ಉಗ್ರರು 26 ಮಂದಿಯನ್ನು ಹತ್ಯೆಗೈದ ಬಳಿಕ ಪ್ರತೀಕಾರವಾಗಿ ಭಾರತವು ಆಪರೇಷನ್‌ ಸಿಂಧೂರ್‌ ಕಾರ್ಯಾಚರಣೆಯ ಮೂಲಕ ಪಾಕ್‌ ಮತ್ತು ಪಾಕ್‌ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಯಶಸ್ವಿ ದಾಳಿ ನಡೆಸಿದೆ. ಈ ದಾಳಿಯಲ್ಲಿ ಉಗ್ರರು ಹತರಾಗಿದ್ದು, ಅವರ ನೆಲೆಗಳು ನಾಶವಾಗಿವೆ.  ಭಯೋತ್ಪಾದಕರನ್ನು ದಮನ ಮಾಡಿ ದೇಶದಲ್ಲಿ ಶಾಂತಿ ಸ್ಥಾಪನೆಗೆ ಹೋರಾಡುತ್ತಿರುವ ಹೆಮ್ಮೆಯ ಸೈನಿಕರಿಗೆ ಶಕ್ತಿ ತುಂಬಲು ಮತ್ತು ಅವರ ಶ್ರೇಯಸ್ಸಿಗಾಗಿ ರಾಜ್ಯದ ಎಲ್ಲಾ ವಕ್ಫ್‌ಗೆ ಸೇರಿದ ಮಸೀದಿಗಳು ಮತ್ತು