ashwath narayana
ಸ್ಮಾರ್ಟ್ ಮೀಟರ್ ಟೆಂಡರ್ ನಲ್ಲಿ 15,568 ಕೋಟಿ ರೂ. ಅವ್ಯವಹಾರ: ಡಾ.ಸಿಎನ್ ಅಶ್ವತ್ಥನಾರಾಯಣ್
ಬೆಂಗಳೂರು: ಬೆಸ್ಕಾಂ ಮತ್ತು ಇತರ ಎಸ್ಕಾಂಗಳ ಸ್ಮಾರ್ಟ್ ಮೀಟರ್ ಟೆಂಡರ್‍ನಲ್ಲಿ ಸುಮಾರು 15,568 ಕೋಟಿ ರೂಪಾಯಿಯ ಬೃಹತ್ ಪ್ರಮಾಣದ ಅವ್ಯವಹಾರ ನಡೆದಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಶಾಸಕ ಡಾ.ಸಿ.ಎನ್. ಅಶ್ವತ್ಥನಾರಾಯಣ್ ಆರೋಪಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಈ ಅವ್ಯವಹಾರದ ಗಾತ್ರ ಇನ್ನೂ ದೊಡ್ಡದೇ ಇದೆ ಎಂದು ದೂರಿದರು. ಎಸ್ಕಾಂಗಳು ಕೆಇಆರ್‍ಸಿ ನಿಯಮಗಳಿಗೆ ಬದ್ಧವಾಗಿರಬೇಕು. ಕೆಇಆರ್‍ಸಿ ನಿಯಮಗಳಲ್ಲಿ ಸ್ಮಾರ್ಟ್ ಮೀಟರ್