Thursday, December 11, 2025
Menu

ನ್ಯಾಷನಲ್ ಹೆರಾಲ್ಡ್ ಆಸ್ತಿ ಮುಟ್ಟುಗೋಲು ವಿರುದ್ಧ ಪ್ರತಿಭಟನೆ: ಡಿಸಿಎಂ ಶಿವಕುಮಾರ್

“ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇ.ಡಿ. ಕಾಂಗ್ರೆಸ್ ಮುಖಂಡರ ಆಸ್ತಿಮುಟ್ಟುಗೋಲು ಹಾಕಿಕೊಂಡು ಆರೋಪಪಟ್ಟಿ ಸಲ್ಲಿಸಿರುವುದನ್ನು ನಾವು ಖಂಡಿಸುತ್ತೇವೆ, ಇದರ ವಿರುದ್ಧ ಪ್ರತಿಭಟನೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್  ಹೇಳಿದ್ದಾರೆ. ಶಿವಕುಮಾರ್ ಅವರು ಕುಮಾರಪಾರ್ಕ್ ನಲ್ಲಿರುವ ಸರ್ಕಾರಿ ನಿವಾಸದಲ್ಲಿ ಮಂಗಳವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ನ್ಯಾಷನಲ್ ಹೆರಾಲ್ಡ್ ಜವಾಹರ್ ಲಾಲ್ ನೆಹರು ಅವರು ಹುಟ್ಟುಹಾಕಿದ ಸಂಸ್ಥೆ. ಅವರ ಕುಟುಂಬ ಇದನ್ನು ಎಂದೂ ವೈಯಕ್ತಿಕವಾಗಿ ಬಳಸಿಕೊಂಡಿಲ್ಲ. ಅವರು ಈ ಸಂಸ್ಥೆಯಿಂದ ಆಸ್ತಿ ಮಾಡಿಕೊಂಡಿಲ್ಲ. ಅನೇಕರ