astrollegerarrest fraud astrollager
ಜಾತಕದೋಷವೆಂದು ಮಹಿಳಾ ಪೊಲೀಸ್‌ಗೆ 5 ಲಕ್ಷ ವಂಚಿಸಿದ್ದ ಜ್ಯೋತಿಷಿ ಅರೆಸ್ಟ್
ಜಾತಕದಲ್ಲಿ ದೊಡ್ಡ ದೋಷವಿದೆ, ಪೂಜೆ ಮಾಡಿ ಸರಿ ಮಾಡುವುದಾಗಿ ಹೇಳಿ ನಂಬಿಸಿ ಮಹಿಳಾ ಪೊಲೀಸ್‌ಗೆ 5 ಲಕ್ಷ ವಂಚಿಸಿದ್ದ ಜ್ಯೋತಿಷಿಯನ್ನು ಬೆಂಗಳೂರಿನ ಆಡುಗೋಡಿ ಪೊಲೀಸರು ಬಂಧಿಸಿದ್ದಾರೆ. ಆಡುಗೋಡಿಯ ಪೊಲೀಸ್ ಕ್ವಾಟ್ರಸ್‌ನಲ್ಲಿದ್ದ ಮಹಿಳಾ ಕಾನ್‌ಸ್ಟೇಬಲ್ ಅನಾರೋಗ್ಯಕ್ಕೆ ಒಳಗಾದಾಗ ಸ್ನೇಹಿತರ ಮೂಲಕ ಕಲಬುರಗಿಯ ಜ್ಯೋತಿಷಿ ಹೇಮಂತ್ ಭಟ್ ಪರಿಚಯವಾಗಿತ್ತು. ಇದಕ್ಕೂ ಮುನ್ನ ಇಬ್ಬರು ಸ್ನೇಹಿತೆಯರು ಜ್ಯೋತಿಷಿ ಮಾತು ನಂಬಿ ಹೋದಾಗ, ಅವರಿಗೂ ಪೂಜೆ ಮಾಡಿದ್ದ. ನಿನ್ನ ಜಾತಕದಲ್ಲಿ ತುಂಬಾ ದೋಷವಿದೆ, ಪೂಜೆ ಮಾಡಿಸಲೇಬೇಕು.