astronauts
ಸುನೀತಾ ವಿಲಿಯಮ್ಸ್ ಸೇರಿ ಫ್ಲೋರಿಡಾ ಸಾಗರದಲ್ಲಿ ಇಂದು ಲ್ಯಾಂಡ್ ಆದ ನಾಲ್ವರು ಗಗನಯಾತ್ರಿಗಳು
ಒಂಬತ್ತು ತಿಂಗಳು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದ ಗಗನಯಾತ್ರಿ ಸುನೀತಾ ವಿಲಿಯಮ್ಸ್ ಮತ್ತು ಬುಚ್ ವಿಲ್ಮೋರ್ ಅವರನ್ನು ಇಂದು ನಸುಕಿನಲ್ಲಿ 3.27ಕ್ಕೆ ಸುರಕ್ಷಿತವಾಗಿ ಭೂಮಿಗೆ ಕರೆತರಲಾಗಿದೆ. ಸುನೀತಾ ವಿಲಿಯಮ್ಸ್, ಬುಚ್‌ವಿಲ್ಮೋರ್ ಸೇರಿ ನಾಲ್ವರು ಗಗನಯಾತ್ರಿಗಳನ್ನು ಹೊತ್ತಿದ್ದ ಸ್ಪೇಸ್ ಎಕ್ಸ್ ಕ್ರೂ ಡ್ರ್ಯಾಗನ್ ಬಾಹ್ಯಾಕಾಶ ನೌಕೆ ಮಂಗಳವಾರ ರಾತ್ರಿ 8.35ಕ್ಕೆ 400 ಕಿ.ಮೀ ದೂರದ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಿಂದ ಭೂಮಿ ಯತ್ತ ಪಯಣ ಆರಂಭಿಸಿತ್ತು. 17 ಗಂಟೆಗಳ ಪಯಣದ ಬಳಿಕ ಇಂದು