Menu

ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಅರಣ್ಯಾಧಿಕಾರಿ ವಜಾಗೊಳಿಸಲು ಆಗ್ರಹ

ಔರಾದ್ : ಪತ್ರಕರ್ತ ರವಿ ಭೂಸಂಡೆ ಮೇಲೆ ಪ್ರಾದೇಶಿಕ ಅರಣ್ಯಾಧಿಕಾರಿಗಳು ಹಲ್ಲೆ ನಡೆಸಿದ್ದನ್ನು ವಿರೋಧಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿಗಳು ಗುರುವಾರ ಪಟ್ಟಣದ ತಹಸೀಲ್ ಕಚೇರಿಯ ಎದುರು ಪ್ರತಿಭಟನೆ ನಡೆಸಿದರು. ತಹಸೀಲ್ ಕಚೇರಿಯ ಆವರಣದಲ್ಲಿ ಜಮಾಯಿಸಿದ್ದ ಮಾಧ್ಯಮದವರು, ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದರು. ಈ ವೇಳೆ ಮಾತನಾಡಿದ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ಮೊಕ್ತೆದಾರ್, ಬೀದರ ಜಿಲ್ಲೆಯ ಕರ್ತವ್ಯನಿರತ ಪತ್ರಕರ್ತ ರವಿ ಭೂಸಂಡೆ ಅವರ ಮೇಲೆ ಹಲ್ಲೆ