Menu

ಬೆಂಗಳೂರಲ್ಲಿ ಆಟೊ ಪ್ರಯಾಣ ದರ ಏರಿಕೆಯ ಬಿಸಿ

ಆಟೋರಿಕ್ಷಾ ಪ್ರಯಾಣ ದರ ಏರಿಕೆ ಮಾಡುವಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಗಳಿಗೆ ಆಟೋ ಚಾಲಕ ಸಂಘಟನೆಗಳು ಮನವಿ ಮಾಡಿವೆ. ಒಂದು ಕಿಲೋಮೀಟರ್​​ಗೆ 5 ರೂಪಾಯಿ, ಎರಡು ಕಿಲೋಮೀಟರ್​ಗೆ 10 ರೂಪಾಯಿ ಏರಿಕೆ ಮಾಡುವಂತೆ ಮಾಡಿವೆ. ಬಸ್‌ ಟಿಕೆಟ್‌ ದರ ಏರಿಕೆಯಿಂದ ಕಂಗೆಟ್ಟ ಜನರಿಗೆ ಈಗ ಆಟೊ ಪ್ರಯಾಣದರ ಹೆಚ್ಚಳದ ಬಿಸಿ ತಾಗಲಿದೆ. ಆಟೋ ಪ್ರಯಾಣ ದರ ಕಿಲೋಮೀಟರ್​ಗೆ 30 ರೂಪಾಯಿ ಇದೆ, ಇದೀಗ 40 ರೂಪಾಯಿಗೆ ಏರಿಕೆ ಮಾಡುವಂತೆ ಮನವಿ ಮಾಡಿವೆ.