Menu

ಆರ್‌ಸಿಬಿ ವಿಜಯೋತ್ಸವ ದುರಂತ: ಬಿ. ದಯಾನಂದ್‌ ಅಮಾನತು ವಿರೋಧಿಸಿ ರಾಜಭವನದೆದುರು ಹೆಡ್‌ ಕಾನ್ಸ್‌ಟೇಬಲ್‌ ಪ್ರತಿಭಟನೆ

ಆರ್‌ಸಿಬಿ ವಿಜಯೋತ್ಸವ ವೇಳೆ ನಡೆದ ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸ್‌ ಕಮಿಷನರ್‌ ಬಿ. ದಯಾನಂದ್‌ ಸೇರಿದಂತೆ ಹಲವರನ್ನು ರಾಜ್ಯ ಸರ್ಕಾರ ಅಮಾನತುಗೊಳಿಸಿದೆ. ಪೊಲೀಸ್‌ ಕಮಿಷನರ್‌ ಬಿ.ದಯಾನಂದ್‌ ಅವರನ್ನು ಅಮಾನತುಗೊಳಿಸಿರುವ ಸರ್ಕಾರ ಆದೇಶದ ವಿರುದ್ಧ ಮಡಿವಾಳ ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ರಾಜಭವನಕ್ಕೆ ತೆರಳಿ ಪ್ರತಿಭಟನೆ ನಡೆಸಿದ್ದಾರೆ. ಹೆಡ್‌ ಕಾನ್ಸ್‌ಟೇಬಲ್‌ ನರಸಿಂಹರಾಜು ಅವರು ಸರ್ಕಾರದ ಕ್ರಮ ಖಂಡಿಸಿ ಅಂಬೇಡ್ಕರ್‌ ಪೋಟೊ ಹಿಡಿದು ಕಪ್ಪುಪಟ್ಟಿ ಧರಿಸಿ ರಾಜಭವನದ ಎದುರು ಅವರು ಪ್ರತಿಭಟನೆ ನಡೆಸಿದ್ದಾರೆ.