B-Khat
ಬಿ-ಖಾತಾ ವಿತರಣೆ ಅವಧಿ 3 ತಿಂಗಳವರೆಗೆ ವಿಸ್ತರಣೆ: ಸಚಿವ ಬಿ.ಎಸ್.ಸುರೇಶ
ರಾಜ್ಯದ ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಅನಧಿಕೃತ ಕಟ್ಟಡ ಮತ್ತು ನಿವೇಶನಗಳಿಗೆ ಬಿ-ಖಾತಾ ನೀಡುವ ಅವಧಿಯನ್ನು ಮುಂದಿನ ಮೂರು ತಿಂಗಳವರೆಗೆ ವಿಸ್ತರಿಸಲಾಗಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ್ ತಿಳಿಸಿದ್ದಾರೆ. ಈ ಬಗ್ಗೆ ಬೆಂಗಳೂರಿನಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಮಹಾನಗರಪಾಲಿಕೆಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಅಂದರೆ, ಯಾವುದೇ ಪರವಾನಗಿ, ಭೂಪರಿವರ್ತನೆ ಮಾಡಿಸಿಕೊಳ್ಳದೇ, ನಕ್ಷೆ ಮಂಜೂರಾತಿ ಮಾಡಿಕೊಳ್ಳದೇ ಕಂದಾಯ ನಿವೇಶನಗಳಲ್ಲಿ ಕಟ್ಟಡಗಳನ್ನು ಕಟ್ಟಿಕೊಂಡಿದ್ದರೆ