BAGALAKOTE
ನೀಲಮಾಣಿಕ ಮಠದ ದಾನೇಶ್ವರ ಸ್ವಾಮೀಜಿ ಇನ್ನಿಲ್ಲ
ಬಾಗಲಕೋಟೆಯ ರಬಕವಿಬನಹಟ್ಟಿ ತಾಲೂಕಿನ ಬಂಡಿಗಣಿ ಗ್ರಾಮದ ಬಸವಗೋಪಾಲ ನೀಲಮಾಣಿಕಮಠದ ದಾನೇಶ್ವರ ಸ್ವಾಮೀಜಿ ನಿಧನಾರದರು. ಅವರಿಗೆ ೭೫ ವರ್ಷ ಆಗಿತ್ತು. ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿಯನ್ನು ನಾಲ್ಕು ದಿನದ ಹಿಂದೆ ಬೆಳಗಾವಿ ಕೆಎಲ್‌ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಗುರುವಾರ ರಾತ್ರಿ ನಿಧನರಾಗಿದ್ದಾರೆ. ದಾಸೋಹ ಚಕ್ರವರ್ತಿ ಅನ್ನದಾನೇಶ್ವರ ಎಂದು ಹೆಸರಾಗಿದ್ದ ಸ್ವಾಮೀಜಿ ಬಾಗಲಕೋಟೆ, ವಿಜಯಪುರ, ಬೆಳಗಾವಿ ಭಾಗಗಳಲ್ಲಿ ಅಪಾರ ಭಕ್ತರನ್ನು ಹೊಂದಿದ್ದಾರೆ. ಶುಕ್ರವಾರ (ಇಂದು) ಮಧ್ಯಾಹ್ನ ಆಸ್ಪತ್ರೆಯಿಂದ ಪಾರ್ಥೀವ ಶರೀರವನ್ನು ಅವರ ಹುಟ್ಟೂರು
ಮುಧೋಳದಲ್ಲಿ 15 ದಿನಗಳ ಕಬ್ಬು ಬೆಳೆಗಾರರ ಹೋರಾಟ ಅಂತ್ಯ
ಬಾಗಲಕೋಟೆ: ಕಳೆದ ಹದಿನೈದು ದಿನಗಳಿಂದ ಮುಧೋಳದಲ್ಲಿ ನಡೆದಿದ್ದ ಕಬ್ಬ ಬೆಳೆಗಾರರ ಹೋರಾಟ ಗುರುವಾರ ಹಿಂಸಾರೂಪ ಪಡೆದುಕೊಂಡಿತ್ತು. ಆದರೆ ಶುಕ್ರವಾರ ಮುಧೋಳದ ರೈತರು ಹಾಗೂ ಸಕ್ಕರೆ ಕಾರ್ಖಾನೆ ಮಾಲೀಕರ ನಡುವೆ ನಡೆದ ಸಂಧಾನ ಸಭೆ ಯಶಸ್ವಿಯಾಗಿದ್ದು, ರೈತರು ಹೋರಾಟ ಹಿಂದೆ ಪಡೆದುಕೊಂಡಿದ್ದಾರೆ. ಮುಧೋಳದ
ಟ್ರ್ಯಾಕ್ಟರ್ ಟ್ರ್ಯಾಲಿಗಳಿಗೆ ಬೆಂಕಿ: ತನಿಖೆಗೆ ಸಚಿವ ಶಿವಾನಂದ ಪಾಟೀಲ ಆದೇಶ
ಬಾಗಲಕೋಟೆ/ ಮಹಾಲಿಂಗಪುರ: ಮುಧೋಳ ತಾಲೂಕಿನ ಸಮೀರವಾಡಿಯ ಗೋದಾವರಿ ಬಯೋ ರಿಫೈನರೀಸ್ ಲಿಮಿಟೆಡ್ ಬಳಿ ಕಬ್ಬು ತುಂಬಿದ ಟ್ರ್ಯಾಕ್ಟರ್ ಟ್ರ್ಯಾಲಿ ಹಾಗೂ ವಾಹನಗಳಿಗೆ ಬೆಂಕಿಗೆ ಹಾಕಿದ ಪ್ರಕರಣ ಕುರಿತು ತನಿಖೆಗೆ ಆದೇಶ ಮಾಡಲಾಗುವುದು ಹಾಗೂ ಹಾನಿಗೆ ಸೂಕ್ತ ಪರಿಹಾರ ನೀಡಲಾಗುವುದು ಎಂದು ಕಬ್ಬು
100ಕ್ಕೂ ಅಧಿಕ ಟ್ರ್ಯಾಕ್ಟರ್ ಟ್ರ್ಯಾಲಿಗೆ ಬೆಂಕಿ ಹಚ್ಚಿ ಕಬ್ಬು ಬೆಳೆಗಾರರ ಆಕ್ರೋಶ
ಬಾಗಲಕೋಟೆ: ಕಬ್ಬಿಗೆ 3500 ರೂ.ದರ ನಿಗದಿ ಸೇರಿದಂತೆ ಹಲವು ಬೇಡಿಕೆಗಳಿಗೆ ಆಗ್ರಹಿಸಿ ಬಾಗಲಕೋಟೆಯ ಮುಧೋಳದಲ್ಲಿ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಗುರುವಾರ ಹಿಂಸಾರೂಪ ಪಡೆದಿದ್ದು, 100ಕ್ಕೂ ಹೆಚ್ಚು ಟ್ರ್ಯಾಕ್ಟರ್ ಟ್ರ್ಯಾಲಿಗಳು ಬೆಂಕಿಗೆ ಆಹುತಿಯಾಗಿವೆ. ರಾಜ್ಯಾದ್ಯಂತ ಕಬ್ಬು ಬೆಳೆಗಾರರು ನಡೆಸುತ್ತಿದ್ದ ಪ್ರತಿಭಟನೆ ಸಿಎಂ
ಬಾಗಲಕೋಟೆ ಶಾಸಕ ಹೆಚ್.ವೈ.ಮೇಟಿ ನಿಧನ
ಅನಾರೋಗ್ಯದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹಿರಿಯ ಕಾಂಗ್ರೆಸ್ ಶಾಸಕ, ಮಾಜಿ ಸಂಸದ, ಮಾಜಿ ಸಚಿವರೂ ಆಗಿದ್ದ ಹೆಚ್.ವೈ.ಮೇಟಿ (79) ನಿಧನರಾದರು. ಹೆಚ್.ವೈ.ಮೇಟಿ ಅವರನ್ನು ಮೊನ್ನೆಯಷ್ಟೇ ಆಸ್ಪತ್ರೆಯಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದರು. ಮೇಟಿಯವರು ತಿಮ್ಮಾಪುರದಲ್ಲಿ 1946 ಅಕ್ಟೋಬರ್
ಹೃದಯಾಘಾತಕ್ಕೆ ಪತಿ ಬಲಿ: ಸುದ್ದಿ ತಿಳಿದ ಪತ್ನಿಯೂ ಕುಸಿದು ಸಾವು
ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಹೃದಯಾಘಾತದಿಂದ ಗಂಡನ ಸಾವಿನ ಸುದ್ದಿ ತಿಳಿದು ಪತ್ನಿಯೂ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ. ಶಶಿಧರ (40) ಮತ್ತು ಸರೋಜಾ (35) ಸಾವಿನಲ್ಲೂ ಒಂದಾದ ದಂಪತಿ. ಚಿನ್ನದ ಅಂಗಡಿ ನಡೆಸುತ್ತಿದ್ದ ಶಶಿಧರ ಹದಿನೈದು ವರ್ಷಗಳ ಹಿಂದೆ ಸರೋಜಾರನ್ನು
ಜಮೀನಿಗಾಗಿ ತಾಯಿ- ಮಗನ ಬರ್ಬರ ಹತ್ಯೆ!
ಬಾಗಲಕೋಟೆ: ಜಮೀನು ವಿಚಾರವಾಗಿ ತಾಯಿ ಹಾಗೂ ಮಗನನ್ನು ಹೊಲದಲ್ಲಿ ಕಡಲಿಯಿಂದ ಕಡಿದು ದೊಡ್ಡಪ್ಪನ ಮಗ ಬರ್ಬರವಾಗಿ ಕೊಲೆ ಮಾಡಿದ ಘಟನೆ ಬಾಗಲಕೋಟೆಯ ಇಳಕಲ್ ನಲ್ಲಿ ನಡೆದಿದೆ. ಇಳಕಲ್ ತಾಲೂಕಿನ ನಂದವಾಡಗಿ ಗ್ರಾಮದಲ್ಲಿ ಹಿನ್ನಲೆಯಲ್ಲಿ 45 ವರ್ಷದ ತಮ್ಮನ ಹೆಂಡತಿ ಸಂಗಮ್ಮ ನಿಂಗಪ್ಪ
ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಮಹತ್ವದ ಭವಿಷ್ಯ
ಬಾಗಲಕೋಟೆ: ಸಂಕ್ರಾಂತಿವರೆಗೆ ರಾಜ್ಯದಲ್ಲಿ ಸಿಎಂ ಬದಲಾವಣೆ ದೋಷ ಕಾಡುತ್ತಿಲ್ಲ. ಇಲ್ಲಿವರೆಗೂ ರಾಜನ ಬದಲಾವಣೆ ಆಗುವ ಯಾವುದೇ ಸಾಧ್ಯತೆ ಇಲ್ಲ ಎಂದು ಹಾಸನ ಜಿಲ್ಲೆಯ ಅರಸಿಕೇರೆಯ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. ಬಾಗಲಕೋಟೆಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ




