Bagappa Harijan murder
ಬಾಗಪ್ಪ ಹರಿಜನ ಕೊಲೆಯ ನಾಲ್ವರು ಆರೋಪಿಗಳು ಸೆರೆ
ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಕೊಲೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ವಿಜಯಪುರ ಪೊಲೀಸರು ಬಂಧಿಸಿದ್ದಾರೆ. ಕೊಲೆ ಬಳಿಕ ಬಾಗಪ್ಪ ಹರಿಜನ ಮಗಳು ಇಂಡಿ ತಾಲೂಕಿನ ಬಬಲಾದಿ ಗ್ರಾಮದ ಗಂಗೂಬಾಯಿ ಬಾಗಪ್ಪ ಹರಿಜನ ದೂರು ನೀಡಿದ್ದರು. ವಿಜಯಪುರ ನಗರ ಡಿವೈಎಸ್ಪಿ ಬಸವರಾಜ ಯಲಿಗಾರ ನೇತೃತ್ವದಲ್ಲಿ ಗಾಂಧಿಚೌಕ ಸಿಪಿಐ ಪ್ರದೀಪ ತಳಕೇರಿ, ಗೋಳಗುಮ್ಮಟ ಸಿಪಿಐ ಮಲ್ಲಯ್ಯ ಮಠಪತಿ ಮತ್ತು ಸಿಬ್ಬಂದಿಯನ್ನೊಳಗೊಂಡ ತಂಡ ರಚಿಸಲಾಗಿತ್ತು ಎಂದು ತಿಳಿಸಿದರು. ಈ ತಂಡ ಕಾರ್ಯಾಚರಣೆ ನಡೆಸಿ