Bagina
ತುಂಬಿದ ಕೆಆರ್‌ಎಸ್‌ಗೆ ಮುಖ್ಯಮಂತ್ರಿಯಿಂದ ಬಾಗಿನ ಅರ್ಪಣೆ
93 ವರ್ಷಗಳ ಇತಿಹಾಸದಲ್ಲಿ ಕೃಷ್ಣರಾಜ ಸಾಗರ ಜಲಾಶಯವು ಜೂನ್ ತಿಂಗಳಲ್ಲಿ ಸಂಪೂರ್ಣವಾಗಿ ಭರ್ತಿಯಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಶಿವಕುಮಾರ್, ಸಚಿವರು, ಶಾಸಕರು ಬಾಗಿನ ಅರ್ಪಿಸಿದರು. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವರಾದ ಚೆಲುವರಾಯಸ್ವಾಮಿ, ಮಹದೇವಪ್ಪ ಹಾಗೂ ಇತರ ಜನಪ್ರತಿನಿಧಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಜಲಾಶಯದಲ್ಲಿ ನೀರು 124.80 ಅಡಿಗಳ ಗರಿಷ್ಠ ಮಟ್ಟ ತಲುಪಿ, 49.452 ಟಿಎಂಸಿ ನೀರು ಸಂಗ್ರಹವಿದೆ. ಜಲಾಶಯದಲ್ಲಿ 28,938 ಕ್ಯೂಸೆಕ್ ಒಳಹರಿವು ಮತ್ತು 28,681 ಕ್ಯೂಸೆಕ್ ಹೊರಹರಿವು ದಾಖಲಾಗಿದೆ.
ಭರ್ತಿಗೊಂಡ ಕೆಆರ್‌ಎಸ್‌ಗೆ ನಾಳೆ ಸಿಎಂ ಬಾಗಿನ ಅರ್ಪಣೆ
ಸಾಕಷ್ಟು ಮಳೆಯಾಗುತ್ತಿರುವ ಕಾರಣ ಕೆಆರ್‌ಎಸ್ ಜಲಾಶಯ ಇತಿಹಾಸದಲ್ಲೇ ಮೊದಲ ಬಾರಿಗೆ ಜೂನ್ ತಿಂಗಳಲ್ಲಿ ಭರ್ತಿಯಾಗಿದೆ. ನಾಳೆ (ಸೋಮವಾರ) ಸಿಎಂ ಸಿದ್ದರಾಮಯ್ಯ ಕಾವೇರಿಗೆ ಬಾಗಿನ ಅರ್ಪಿಸಲಿದ್ದಾರೆ. ಜೂನ್‌ನಲ್ಲಿ ಬಾಗಿನ ಅರ್ಪಿಸುವ ಅವಕಾಶ ಪಡೆದ ಮೊದಲ ಸಿಎಂ ಸಿದ್ದರಾಮಯ್ಯ ಎಂಬ ಹೆಗ್ಗಳಿಕೆ ತನ್ನದಾಗಿಸಿಕೊಳ್ಳಲಿದ್ದಾರೆ. ಬಾಗಿನ