bandipura
ಬಂಡೀಪುರದಲ್ಲಿ ಅಕ್ರಮ ಫೋಟೋ ಶೂಟ್ ಮಾಡಿದವರಿಗೆ ಬಿತ್ತು ದಂಡ
ಗುಂಡ್ಲುಪೇಟೆ : ತಾಲೂಕಿನ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅಕ್ರಮ ಪ್ರವೇಶ ಮಾಡಿದ್ದ ಇಬ್ಬರು ಪ್ರವಾಸಿಗರಿಗೆ ಅರಣ್ಯ ಇಲಾಖೆ 25 ಸಾವಿರ ರೂ.ದಂಡ ವಿಧಿಸಿ, ಮುಚ್ಚಳಿಕೆ ಪತ್ರ ಬರೆಸಿಕೊಂಡಿರುವ ಘಟನೆ ನಡೆದಿದೆ. ಬೆಂಗಳೂರು ಮೂಲದ ಪಲ್ಲವಿ ಮತ್ತು ಘೋಷ್ ಎಂಬುವವರಿಗೆ ಅರಣ್ಯ ಇಲಾಖೆ ಅಧಿಕಾರಿಗಳು ದಂಡ ವಿಧಿಸಿದ್ದು, ಇಬ್ಬರು ಬಂಡೀಪುರದ ಪ್ರವಾಸದ ಸಂದರ್ಭದಲ್ಲಿ ಮಂಗಲ ಸಮೀಪ ರಸ್ತೆಯ ಕಾಡಿನೊಳಗೆ ಅತಿಕ್ರಮವಾಗಿ ಪ್ರವೇಶಿಸಿ ಕಾಡಿನಲ್ಲಿ ಫೋಟೋ ಶೂಟ್ ಮಾಡುತ್ತಿದ್ದರು. ಆ
ಬಂಡೀಪುರದಲ್ಲಿ ರಾತ್ರಿ ಸಂಚಾರ ಕುರಿತು ಸಿಎಂ ಜೊತೆ ಚರ್ಚಿಸಿ ತೀರ್ಮಾನ: ಈಶ್ವರ ಖಂಡ್ರೆ
ನವದೆಹಲಿ: ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ