Thursday, December 11, 2025
Menu

ನಗರದ ಜ್ಞಾನ ಇರುವವರು ಉಸ್ತುವಾರಿ ಸಚಿವರಾಗಲಿ ಎಂದ ಆರ್‌. ಅಶೋಕ್‌

ಬೆಂಗಳೂರಿಗೆ ಬೆಂಗಳೂರಿನವರೇ ಆದ ಸಚಿವರಿಲ್ಲ. ಬೇರೆ ಜಿಲ್ಲೆಯ ಸಚಿವರಿಗೆ ನಗರದ ಬಗ್ಗೆ ಆಸಕ್ತಿ ಇಲ್ಲ. ಸರ್ಕಾರದಿಂದಾಗಿ ಬೆಂಗಳೂರು ಅನಾಥವಾಗಿದೆ. ಬೆಂಗಳೂರು ನಗರದ ಜ್ಞಾನ ಇರುವವರು ಉಸ್ತುವಾರಿ ಸಚಿವರಾಗಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ ಅಭಿವೃದ್ಧಿ ಸೊನ್ನೆಯಾಗಿದೆ. ರಸ್ತೆಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಅಭಿವೃದ್ಧಿಯೂ ಸೊನ್ನೆ ಯೇ ಆಗಿದೆ. ರಸ್ತೆಗುಂಡಿಗಳಿಂದ ಬಿದ್ದು ಗಾಯಕ್ಕೊಳಗಾಗಿ ಜನರು ಆಸ್ಪತ್ರೆ ಸೇರುತ್ತಿದ್ದಾರೆ. ಎಲ್ಲ ಕಡೆ ಕಸದ ರಾಶಿ ಕಂಡುಬರುತ್ತಿದೆ.