Menu

ಫೋಟೋ ಶೂಟಿಂಗ್ ಮಾಡಿದರೆ ಸಮಸ್ಯೆಗಳು ಪರಿಹಾರ ಆಗಲ್ಲ: ಡಿಸಿಎಂಗೆ ಆರ್‌. ಅಶೋಕ್‌ ಟಾಂಗ್‌

ವೈಟ್ ಟಾಪಿಂಗ್ ಕಾಮಗಾರಿ ಹೆಸರಿನಲ್ಲಿ ಫೋಟೋ ಶೂಟಿಂಗ್ ಮಾಡಿದರೆ ಬೆಂಗಳೂರಿನ ಸಮಸ್ಯೆಗಳು ಪರಿಹಾರ ಆಗುತ್ತಾ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರೇ ಎಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ  ಪ್ರತಿಪಕ್ಷ ನಾಯಕ ಆರ್‌. ಅಶೋಕ್‌ ಕಾಲೆಳೆದಿದ್ದಾರೆ. ಬೆಂಗಳೂರು ಅಭಿವೃದ್ಧಿ ಸಚಿವರಾಗಿ ನಿಮಗೆ ಬ್ರ್ಯಾಂಡ್ ಬೆಂಗಳೂರಿನ ಬಗ್ಗೆ ನಿಜವಾಗಿಯೂ ಕಾಳಜಿ ಇದ್ದರೆ ನೀವು ಮಾಡಬೇಕಾದ ಕೆಲಸ ಬೇಕಾದಷ್ಟಿದೆ. 660 ಕೋಟಿ ರೂಪಾಯಿ ಖರ್ಚು ಮಾಡಿದರೂ ಬೆಂಗಳೂರು ನಗರದಾದ್ಯಂತ ಇನ್ನೂ ಸಾವಿರಾರು ರಸ್ತೆಗುಂಡಿಗಳು ಬಾಯ್ತೆರೆದುಕೊಂಡೇ ಇವೆ.

ಅಂತಾರಾಷ್ಟ್ರೀಯ ಗುಣಮಟ್ಟದ ಶಾಶ್ವತ ರಸ್ತೆಗಾಗಿ ವೈಟ್ ಟ್ಯಾಪಿಂಗ್: ಡಿಸಿಎಂ

ಬ್ರ್ಯಾಂಡ್ ಬೆಂಗಳೂರು ಸುಗಮ ಸಂಚಾರ ಯೋಜನೆ ಅಡಿ ನಗರದಲ್ಲಿ ಅಂತಾರಾಷ್ಟ್ರೀಯ ಗುಣಮಟ್ಟದ ರಸ್ತೆಗಳನ್ನು ನಿರ್ಮಿಸಲು ವೈಟ್ ಟ್ಯಾಪಿಂಗ್ ಮಾಡಲಾಗುತ್ತಿದೆ. 30 ವರ್ಷ ಬಾಳಿಕೆ ಬರುವ ಶಾಶ್ವತ ರಸ್ತೆ ನಿರ್ಮಿಸುವ ಈ ಯೋಜನೆಗೆ ₹ 1700 ಕೋಟಿ ಹಣ ವೆಚ್ಚ ಮಾಡಲಾಗುತ್ತಿದೆ ಎಂದು