Bangalore suburban
ನೆಲಮಂಗಲ, ದೇವನಹಳ್ಳಿಯಲ್ಲಿ ಶೀಘ್ರ ರೈಲು ಟರ್ಮಿನಲ್
ಬೆಂಗಳೂರು ನಗರದ ರೈಲು ನಿಲ್ದಾಣಗಳಲ್ಲಿ ಜನದಟ್ಟಣೆ ಹೆಚ್ಚುತ್ತಿರುವ ಕಾರಣ ನಗರ ಹೊರವಲಯದಲ್ಲಿ ಎರಡು ರೈಲ್ವೆ ಟರ್ಮಿನಲ್ಗಳನ್ನು ತೆರೆಯಲು ಕೇಂದ್ರ ರೈಲ್ವೆ ಇಲಾಖೆ ಮುಂದಾಗಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕೇಂದ್ರ ರೈಲ್ವೆ ರಾಜ್ಯ ಖಾತೆ ಸಚಿವ ವಿ. ಸೋಮಣ್ಣ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣದ ಮಾದರಿಯಲ್ಲಿ ಎರಡು ಹೊಸ ರೈಲ್ವೆ ಟರ್ಮಿನಲ್ಗಳನ್ನು ನಿರ್ಮಾಣ ಮಾಡಲಾಗುವುದು. ಬೆಂಗಳೂರು ಗ್ರಾಮಾಂತರ ವ್ಯಾಪ್ತಿಯ ನೆಲಮಂಗಲ, ಚಿಕ್ಕಬಳ್ಳಾಪುರ ಜಿಲ್ಲೆಯ ದೇವನಹಳ್ಳಿಯಲ್ಲಿ ಹೊಸದಾಗಿ ರೈಲ್ವೆ ನಿಲ್ದಾಣ ನಿರ್ಮಾಣ