Bangalore Urban district
ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಸೂಚನೆ
ಬೆಂಗಳೂರು ನಗರ ಜಿಲ್ಲೆಯ ಕೆರೆಗಳಿಗೆ ಕಲುಷಿತ ನೀರು ಹರಿಯದಂತೆ ಕ್ರಮ ಕೈಗೊಳ್ಳಲು ಹಾಗೂ ಎಲ್ಲಾ ಕೆರೆಗಳಿಗೆ ಸಂಸ್ಕರಿಸಿದ ನೀರು ತುಂಬಿಸಲು ಡಿಸಿಎಂ ಡಿ.ಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೋಮವಾರ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಕೆರೆಗಳ ಸಂರಕ್ಷಣೆ, ಕಸ ವಿಲೇವಾರಿ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಪ್ರಮುಖ ತೀರ್ಮಾನಗಳನ್ನು ಕೈಗೊಂಡರು. ಕೆರೆಗಳ ಸಂರಕ್ಷಣೆ ದೃಷ್ಟಿಯಿಂದ