Menu

ಸೆಕ್ಸ್‌ ನಿರಾಕರಿಸಿದ ಮಹಿಳೆ, ಮಗುವನ್ನು ಕೊಂದಾತನಿಗೆ ಜೀವಾವಧಿ ಶಿಕ್ಷೆ

ಹೊಸಪೇಟೆ ಮೂಲದ ಪ್ರಶಾಂತ್ ಎಂಬಾತ ಲೈಂಗಿಕ ಸಂಪರ್ಕಕ್ಕೆ ಸಹಕರಿಸದಿದ್ದಕ್ಕೆ ಚಾಕುವಿನಿಂದ ಚುಚ್ಚಿ ಮಹಿಳೆಯನ್ನು ಸಾಯಿಸಿ, ನಾಲ್ಕು ವರ್ಷದ ಮಗುವನ್ನು ಕೊಂದ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಗೆ ಗುರಿಯಾಗಿದ್ದಾನೆ. ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸೆಷನ್ಸ್‌ ನ್ಯಾಯಾಲಯ ಅಪರಾಧಿಗೆ ಒಂದು ಲಕ್ಷ ದಂಡ ಕೂಡ ವಿಧಿಸಿದೆ. 51ನೇ ಸಿಟಿ ಸಿವಿಲ್‌ ಮತ್ತು ಸೆಷನ್ಸ್‌ ಕೋರ್ಟ್‌ ನ್ಯಾಯಾಧೀಶರಾದ ಸಿ.ಬಿ. ಸಂತೋಷ್‌ ತನಿಖಾಧಿಕಾರಿಗಳ ಪರ ಸರ್ಕಾರಿ ಅಭಿಯೋಜಕರಾಗಿ ಬಿ.ಎಚ್.ಭಾಸ್ಕರ್ ವಾದ

ಬೆಂಗಳೂರಿನಲ್ಲಿ ಮಾರ್ಚ್‌ 1ರಿಂದ ಅಂತರರಾಷ್ಟ್ರೀಯ ಚಲನಚಿತ್ರೋತ್ಸವ

ಮಾರ್ಚ್ 1ರಿಂದ 16ನೇ ಬೆಂಗಳೂರು ಅಂತರರಾಷ್ಟ್ರೀಯ ಚಲನಚಿತ್ರೋತ್ಸವ(BIFFes)ಆರಂಭವಾಗಲಿದ್ದು, 60 ದೇಶಗಳಿಂದ 200ಕ್ಕೂ ಹೆಚ್ಚು ಚಲನಚಿತ್ರ ಪ್ರದರ್ಶನಗೊಳ್ಳಲಿವೆ. ‘ಸರ್ವ ಜನಾಂಗದ ಶಾಂತಿಯ ತೋಟ’ ಎಂಬ ಥೀಮ್‌ನಡಿಯಲ್ಲಿ ಚಲನಚಿತ್ರೋತ್ಸವ ನಡೆಯಲಿದೆ ಎಂದು ಚಿತ್ರೋತ್ಸವ ಸಮಿತಿ ಅಧ್ಯಕ್ಷೆ ಬಿ.ಬಿ.ಕಾವೇರಿ ಹೇಳಿದ್ದಾರೆ. ಮಾರ್ಚ್ 1 ರ ಸಂಜೆ

ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ಬಿಬಿಎಂಪಿ ಕಚೇರಿ ಉದ್ಯೋಗಿ ಆತ್ಮಹತ್ಯೆ

ಬಿಬಿಎಂಪಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರು ವಾಸವಿದ್ದ ಚಾಮರಾಜಪೇಟೆಯ ಮನೆಯಲ್ಲಿ ಯಾರೂ ಇಲ್ಲದಿದ್ದಾಗ ನೇಣು ಬಿಗಿದುಕೊಂಡು ಅತ್ಮಹತ್ಯೆ ಮಾಡಿಕೊಂಡಿದ್ದಾರೆ. ನಂದಿನಿ (32) ಆತ್ಮಹತ್ಯೆ ಮಾಡಿಕೊಂಡವರು. ಫೆ.23ರ ರಾತ್ರಿ ಈ ದುರಂತ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಪೊಲೀಸರು ಬರುವ ಮುನ್ನವೇ ಕುಟುಂಬಸ್ಥರು

ಗರುಡ ಮಾಲ್ ಬಳಿ ಶಾಸಕ ಹ್ಯಾರಿಸ್‌ ಆಪ್ತನ ಕೊಲೆ

ಬೆಂಗಳೂರಿನ ಅಶೋಕನಗರದ ಗರುಡ ಮಾಲ್ ಬಳಿ ಲೈವ್ ಬ್ಯಾಂಡ್‌ನಿಂದ ಶನಿವಾರ ರಾತ್ರಿ ಹೊರ ಬರುತ್ತಿದ್ದಾಗ ಕಾಂಗ್ರೆಸ್ ಮುಖಂಡನನ್ನು ಅಡ್ಡಗಟ್ಟಿ ಕೊಲೆ ಮಾಡಿರುವ ಘಟನೆ ನಡೆದಿದೆ. ತಡರಾತ್ರಿ 1 ಗಂಟೆಗೆ ಘಟನೆ ನಡೆದಿದ್ದು, ಆನೆಪಾಳ್ಯ ನಿವಾಸಿ ಶೇಖ್‌ ಅಲಿ ಕೊಲೆಯಾದ ಕಾಂಗ್ರೆಸ್ ಮುಖಂಡ.

ಪಾರ್ಕ್ ಮಾಡಿದ್ದ ಕಾರಿನಲ್ಲಿ ಹೃದಯಾಘಾತಕ್ಕೆ ಯುವಕ ಬಲಿ

ಪಾರ್ಕ್ ಮಾಡಿದ್ದ ಕಾರಿನಲ್ಲಿ ಹೃದಯಾಘಾತದಿಂದ ಯುವಕ ಮೃತಪಟ್ಟಿರುವ ಘಟನೆ ಬೆಂಗಳೂರು ನಗರದ ಬ್ರೂಕ್ ಫೀಲ್ಡ್ ರಸ್ತೆಯಲ್ಲಿ ನಡೆದಿದೆ. ಪ್ರತಿಷ್ಠಿತ ಐಟಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿ, ಇಂದಿರಾನಗರ ನಿವಾಸಿ ಸಂತೋಷ್ ಪ್ರಸಾದ್ (37) ಮೃತಪಟ್ಟವರು. ಎಂದಿನಂತೆ ಕಾರಿನಲ್ಲಿ ಆಫೀಸಿಗೆ ಹೋಗುವಾಗ ಹೃದಯಾಘಾತ

ಅತ್ತೆಯ ಸಾಯಿಸಲು ವೈದ್ಯರಲ್ಲಿ ಮಾತ್ರೆ ಕೇಳಿದ್ದ ಸೊಸೆ ಪತ್ತೆ

ಬೆಂಗಳೂರಿನ ವೈದ್ಯರಲ್ಲಿ ಅತ್ತೆಯನ್ನು ಸಾಯಿಸಲು ಮಾತ್ರೆ ಕೇಳಿದ್ದ ಸೊಸೆಯನ್ನು ಸಂಜಯ್ ನಗರದ ಪೊಲೀಸರು ಪತ್ತೆ ಹಚ್ಚಿದ್ದಾರೆ. ಮಹಿಳೆ ಮೂಲತ: ಕೊಳ್ಳೇ ಗಾಲದವರು ಎನ್ನಲಾಗಿದ್ದು, ಪತಿಯೊಂದಿಗೆ ಬೆಂಗಳೂರಿನ ಚೌಟ್ರಿಪಾಳ್ಯದಲ್ಲಿ ವಾಸವಾಗಿದ್ದರು. ದಂಪತಿಗೆ ಒಂದೂವರೆ ವರ್ಷದ ಮಗುವಿದ್ದು, ಪತಿ ಕ್ಯಾಬ್ ಚಾಲಕ. ವೈದ್ಯರಿಗೆ ಮಾತ್ರೆ

ಅತ್ತೆಯ ಸಾಯಿಸಲು ಮಾತ್ರೆ ಕೇಳಿದ ಮಹಿಳೆ: ಪೊಲೀಸ್‌ಗೆ ಮಾಹಿತಿ ನೀಡಿದ ವೈದ್ಯ

ಬೆಂಗಳೂರಿನ ಸಂಜಯನಗರ ವ್ಯಾಪ್ತಿಯಲ್ಲಿ ವೈದ್ಯರೊಬ್ಬರಲ್ಲಿ ಮಹಿಳೆಯು ಅತ್ತೆಯನ್ನು ಕೊಲ್ಲಲು ಮಾತ್ರೆ ಕೇಳಿರುವುದು ವರದಿಯಾಗಿದೆ. ಮಹಿಳೆಯು, ನನ್ನ ಅತ್ತೆಯನ್ನು ಸಾಯಿಸಲು ಮಾತ್ರೆ ಬರೆದುಕೊಡಿ ಎಂದು ಕೇಳಿದ್ದಕ್ಕೆ ವೈದ್ಯರೂ ಒಂದು ಕ್ಷಣ ಶಾಕ್ ಆಗಿದ್ದಾರೆ. ಡಾಕ್ಟರ್ ಸುನೀಲ್ ಕುಮಾರ್ ಎನ್ನುವವರನ್ನು ಮಹಿಳೆಯೊಬ್ಬರು ವಾಟ್ಸಾಪ್‌ನಲ್ಲಿ ಸಂಪರ್ಕಿಸಿದ್ದಾರೆ.

ಕುಡಿದು ಕಾರು ಚಾಲನೆ: ಇಬ್ಬರು ಕಾಲೇಜು ವಿದ್ಯಾರ್ಥಿಗಳ ಸಾವು

ಬೆಂಗಳೂರಿನಲ್ಲಿ ಕಂಠಪೂರ್ತಿ ಕುಡಿದು ಕಾರು ಚಾಲನೆ ಮಾಡಿ ಮರಕ್ಕೆ ಡಿಕ್ಕಿ ಹೊಡೆದು ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಬನ್ನೇರುಘಟ್ಟ ಸಮೀಪ ರಾಗಿಹಳ್ಳಿ ಬಳಿ ನಡೆದಿದೆ. ಕೇರಳ ಮೂಲದ ಸಹಾಹುಕ್ (28) ಮತ್ತು ಅರ್ಶು (23) ಮೃತ ವಿದ್ಯಾರ್ಥಿಗಳೆಂದು ಗುರುತಿಸಲಾಗಿದೆ.

ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ: ಬೊಮ್ಮಾಯಿ

ರಾಜ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿರುವುದರಿಂದ ಎಲ್ಲದರ ಏರಿಕೆ ಮಾಡುತ್ತಿದೆ. ಮೆಟ್ರೊ ದರ ಏರಿಕೆಗೆ ರಾಜ್ಯ ಸರ್ಕಾರವೇ ಶಿಫಾರಸು ಮಾಡಿದೆ. ಮುಖ್ಯಮಂತ್ರಿಗಳು ದರ ಏರಿಕೆ ವಿಚಾರವಾಗಿ‌ ನಿರ್ದೇಶನ‌ ಕೊಟ್ಟಿರುವುದೇ ಅದಕ್ಕೆ ಸಾಕ್ಷಿ  ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ಹುಬ್ಬಳ್ಳಿಯಲ್ಲಿ

2 ಹಾಗೂ 3ನೇ ಹಂತದ ನಗರಗಳತ್ತ ಮುಖಮಾಡಿ: ಉದ್ಯಮಿಗಳಿಗೆ ಡಿ.ಕೆ. ಶಿವಕುಮಾರ್ ಸಲಹೆ

ಬೆಂಗಳೂರು ಹೊರತಾಗಿ ರಾಜ್ಯದ 2ನೇ ಹಾಗೂ 3ನೇ ಹಂತದ ನಗರಗಳತ್ತ ಮುಖ ಮಾಡಿ. ನಮ್ಮ ಸರ್ಕಾರ ನಿಮಗೆ ಹೆಚ್ಚಿನ ಪ್ರೋತ್ಸಾಹ ನೀಡುತ್ತದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರು ಸಲಹೆ ನೀಡಿದರು. ಅರಮನೆ ಮೈದಾನದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಸಮಾವೇಶದಲ್ಲಿ