Bangla former PM
ಬಾಂಗ್ಲಾದ ಮಾಜಿ ಪ್ರಧಾನಿ ಹಸೀನಾಗೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆರು ತಿಂಗಳ ಜೈಲು
ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿ (ಐಸಿಟಿ) ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರಿಗೆ ನ್ಯಾಯಾಂಗ ನಿಂದನೆ ಪ್ರಕರಣದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿದೆ. ಅಂತಾರಾಷ್ಟ್ರೀಯ ಅಪರಾಧ ನ್ಯಾಯಮಂಡಳಿಯ ಅಧ್ಯಕ್ಷ ನ್ಯಾಯಮೂರ್ತಿ ಎಂಡಿ ಗೋಲಮ್ ಮೊರ್ಟುಜಾ ಮೊಜುಂದರ್ ನೇತೃತ್ವದ ಮೂವರು ಸದಸ್ಯರ ಪೀಠವು ಈ ತೀರ್ಪು ನೀಡಿದೆ. ಅಧಿಕಾರದಿಂದ ಉಚ್ಚಾಟನೆಗೊಂಡು ದೇಶಭ್ರಷ್ಟರಾಗಿರುವ ಶೇಖ್ ಹಸೀನಾ 1 ವರ್ಷದ ಹಿಂದೆ ಬಾಂಗ್ಲಾದೇಶದಿಂದ ಭಾರತಕ್ಕೆ ಪಲಾಯನ ಮಾಡಿದ ನಂತರ ಈ ಶಿಕ್ಷೆ ವಿಧಿಸಲಾಗಿದೆ.