Menu

ಬೀದರ್ ಬೆನ್ನಲ್ಲೇ ಮಂಗಳೂರಿನಲ್ಲೂ ಬ್ಯಾಂಕ್ ದರೋಡೆ; 12 ಕೋಟಿ ಮೌಲ್ಯದ ಚಿನ್ನ, ನಗದು ಹೊತ್ತು ಪರಾರಿ!

ಬೀದರ್ ಎಟಿಎಂ ದರೋಡೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಹಾಡುಹಗಲೇ ಬ್ಯಾಂಕ್ ದರೋಡೆ ನಡೆದಿದ್ದು, ರಾಜ್ಯದ ಜನತೆ ಬೆಚ್ಚಿಬಿದ್ದಿದ್ದಾರೆ. ಮಂಗಳೂರಿನ ಉಳ್ಳಾಲ ತಾಲೂಕಿನ ಕೆಸಿ ರಸ್ತೆಯ ಕೋಟೆಕಾರ್ ಬ್ಯಾಂಕ್ ನುಗ್ಗಿದ ಮುಸುಕುಧಾರಿ 5 ಮಂದಿ ದುಷ್ಕರ್ಮಿಗಳು ಲಾಂಗ್, ಮಚ್ಚು ತೋರಿಸಿ ಬ್ಯಾಂಕ್ ನಲ್ಲಿದ್ದ 12 ಕೋಟಿ ರೂ ಮೌಲ್ಯದ ನಗದ ಹಾಗೂ ಚಿನ್ನಾಭರಣ ಹೊತ್ತು ಪರಾರಿಯಾಗಿದ್ದಾರೆ. ಮಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯ ಕಾರ್ಯಕ್ರಮದ ಕಾರಣ ಹೆಚ್ಚಿನ ಪೊಲೀಸರು ಅದರ ಭದ್ರತೆಗೆ ತೆರಳಿದ್ದರು. ಇದನ್ನೇ