Bankapur wildlife sanctuary
ಬಂಕಾಪುರ ವನ್ಯಧಾಮದಲ್ಲಿ 8 ಮರಿಗಳಿಗೆ ಜನ್ಮ ನೀಡಿದ ತೋಳ
ಕರ್ನಾಟಕ ಅರಣ್ಯ ಇಲಾಖೆ ನಿರ್ವಹಿಸುತ್ತಿರುವ ಕೊಪ್ಪಳ ಜಿಲ್ಲೆ ಬಂಕಾಪೂರ ತೋಳಧಾಮದಲ್ಲಿ ಇತ್ತೀಚೆಗೆ ಹೆಣ್ಣು ತೋಳವೊಂದು 8 ಮರಿಗಳಿಗೆ ಜನ್ಮ ನೀಡಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಮಾಹಿತಿ ನೀಡಿದ್ದಾರೆ. ಮಾದ್ಯಮ ಹೇಳಿಕೆ ನೀಡಿರುವ ಖಂಡ್ರೆ, ಗಂಗಾವತಿ ಪ್ರಾದೇಶಿಕ ವಲಯದ ವ್ಯಾಪ್ತಿಯಲ್ಲಿ 332 ಹೆಕ್ಟರ್ ಪ್ರದೇಶದಲ್ಲಿರುವ ಬಂಕಾಪೂರ ತೋಳಧಾಮವು ಕುರುಚಲು ಅರಣ್ಯದೊಳಗೆ ಗುಡ್ಡಗಳು, ಸ್ವಾಭಾವಿಕ ಗುಹೆಗಳನ್ನೂ ಹೊಂದಿದ್ದು, ತೋಳ, ಚಿರತೆ, ನವಿಲು, ಕತ್ತೆಕಿರುಬ, ನರಿ, ಮೊಲ,