Wednesday, September 17, 2025
Menu

ಐಫೋನ್ ಖರೀದಿ ತಂದೆ ಬೈದಿದ್ದಕ್ಕೆ ನೊಂದ ಮಗ ಆತ್ಮಹತ್ಯೆ

ಬೆಳಗಾವಿ: ಐಫೋನ್ ಖರೀಸಿದ್ದನ್ನು ಪ್ರಶ್ನಿಸಿ ತಂದೆ ಬೈದಿದ್ದರಿಂದ ನೊಂದ ಮಗ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ನ್ಯೂ ವೈಭವ ನಗರದಲ್ಲಿ ಗುರುವಾರ ರಾತ್ರಿ ನಡೆದಿದೆ. ನ್ಯೂ ವೈಭವ ನಗರದ ಮುಸ್ತಫೀಸ್ ಅಬ್ದುಲ್ ರಶೀದ್ ಶೇಖ್ (24) ಆತ್ಮಹತ್ಯೆ ಮಾಡಿಕೊಂಡವರು. ಶೇಖ್ ಇಎಂಐ ಮೂಲಕ 70 ಸಾವಿರ ರೂ. ಬೆಲೆಯ ಐಫೋನ್ ಖರೀದಿಸಿದ್ದ. ಈ ವಿಚಾರ ಗೊತ್ತಾಗಿ ಇಷ್ಟೊಂದು ಹಣ ಕೊಟ್ಟು ಯಾಕೆ ಮೊಬೈಲ್ ತಗೊಂಡಿದ್ದೀಯಾ? ಕಡಿಮೆ ದರದ

ಯತ್ನಾಳ್​ ಉಚ್ಚಾಟನೆ: ಏ.13ಕ್ಕೆ‌ ಬೆಳಗಾವಿಯಲ್ಲಿ ಪ್ರತಿಭಟನೆ ಎಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ

ಏ.10ರೊಳಗೆ ಬಸನಗೌಡ ಪಾಟೀಲ ಯತ್ನಾಳ್​ ಅವರ ಉಚ್ಚಾಟನೆ ಆದೇಶ ವಾಪಸ್‌ ಪಡೆಯದಿದ್ದರೆ ಏ.13ರಂದು‌ ಬೆಳಗಾವಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತೇವೆ ಎಂದು ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಬಿಜೆಪಿ ಹೈಕಮಾಂಡ್​ಗೆ ಎಚ್ಚರಿಕೆ ನೀಡಿದ್ದಾರೆ. ಪಂಚಮಸಾಲಿ ಬಂಧುಗಳು, ಹಿಂದೂಪರ‌ ಕಾರ್ಯಕರ್ತರು,

ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಪೋಸ್ಟ್‌

ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಉದ್ಧಟತನ ತೋರಿದೆ. ಮಹಾರಾಷ್ಟ್ರದಲ್ಲಿ ಎಂಇಎಸ್ ಮುಖಂಡ ಶುಭಂ ಶಳಕೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಇಎಸ್‌ ಹೀಗೆ ಪ್ರತಿಕ್ರಿಯಿಸಿದೆ. ಕನ್ನಡ ಪರ ಹೋರಾಟಗಾರರು ಹಾಗೂ ಕರ್ನಾಟಕ ಅಪಹಾಸ್ಯ ಮಾಡಿದ್ದ

ಬೆಳಗಾವಿಯಲ್ಲಿ ಇಂದು 3 ಸಾವಿರ ಗರ್ಭಿಣಿಯರಿಗೆ ಸಾಮೂಹಿಕ‌ ಸೀಮಂತ!

ಬೆಳಗಾವಿ: ರಾಜ್ಯದಲ್ಲೇ ಪ್ರಥಮ ಬಾರಿಗೆ 3 ಸಾವಿರ ಗರ್ಭಿಣಿಯರಿಗೆ ಸಾಮೂಹಿಕ‌ ಸೀಮಂತ ಕಾರ್ಯಕ್ರಮವನ್ನು ಸೋಮವಾರವಾದ ಇಂದು ನಗರದಲ್ಲಿ ಹಮ್ಮಿಕೊಂಡಿದ್ದು,ತವರು ಮನೆಯಲ್ಲಿ ಸಿಗುವ ಆತಿಥ್ಯದಂತೆ ಗರ್ಭಿಣಿಯರಿಗೆ ಉಡಿ ತುಂಬಿ, ಹೋಳಿಗೆ ಊಟ ಹಾಕುತ್ತಿದ್ದೇವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ

ಬೆಳಗಾವಿಯಲ್ಲಿ ಬಸ್‌ ಕಳ್ಳಿಯರ ಗ್ಯಾಂಗ್‌ ಸೆರೆ, ಚಿನ್ನಾಭರಣ ವಶ

ರಾಜ್ಯ ಸರ್ಕಾರ ಶಕ್ತಿ ಯೋಜನೆಯನ್ನು ಜಾರಿಗೊಳಿಸಿದ ಬಳಿಕ  ಸರ್ಕಾರಿ ಬಸ್ಸುಗಳು  ಮಹಿಳೆಯರಿಂದ ತುಂಬಿ ತುಳುಕುತ್ತಿರುವುದನ್ನೇ  ದಾಳ ಮಾಡಿಕೊಂಡು ಬಸ್‌ ಗಳಲ್ಲಿ   ಕಳ್ಳತನ ಮಾಡುತ್ತಿದ್ದ ಕಳ್ಳಿಯರ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ನಗರದ ವಡ್ಡರವಾಡಿಯ ಅನಿತಾ ಚೌಗಲೆ, ನಿಶಾ ಲೊಂಡೆ, ಗಿಡ್ಡಿ

ಮೂರು ಮಕ್ಕಳ ಜೊತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ

ಮೂರು ಮಕ್ಕಳ ಜೊತೆ ನದಿಗೆ ಹಾರಿ ತಾಯಿ ಆತ್ಮಹತ್ಯೆ ಮಾಡಿಕೊಂಡ ಆಘಾತಕಾರಿ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಚಿಂಚಲಿ ಗ್ರಾಮದಲ್ಲಿ ತಾಯಿ ಶಾರದಾ, ಮಕ್ಕಳಾದ ಅಮೃತಾ, ಆದರ್ಶ ಮತ್ತು ಅನುಷ್ಕಾ ಮೃತಪಟ್ಟಿದ್ದಾರೆ. ಮೂರು ಮಕ್ಕಳೊಂದಿಗೆ ತಾಯಿ

ಪ್ರೇಯಸಿಯ ಕತ್ತು ಸೀಳಿ ಕೊಲೆಗೈದು ಪ್ರೇಮಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದ ಪ್ರೇಯಸಿಯ ಕತ್ತು ಸೀಳಿ ಪಾಗಲ್ ಪ್ರೇಮಿ ಕೊಲೆಗೈದು ಆತ್ಮಹತ್ಯೆ ಮಾಡಿಕೊಂಡ ಭೀಕರ ಘಟನೆ ಬೆಳಗಾವಿ ಜಿಲ್ಲೆಯ ಶಹಾಪುರದ ನವಿ ಗಲ್ಲಿಯಲ್ಲಿ ನಡೆದಿದೆ. ಯಳ್ಳೂರು ಗ್ರಾಮದ ಪ್ರಶಾಂತ ಯಲ್ಲಪ್ಪ ಕುಂಡೇಕರ (29) ಪ್ರೇಯಸಿ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೇಂಟಿಂಗ್

ಉದ್ಯಮಿಯ ಅಪಹರಿಸಿ ಹಣಕ್ಕೆ ಬೇಡಿಕೆ: ಸತೀಶ್‌ ಜಾರಕಿಹೊಳಿ ಆಪ್ತೆಯ ಬಂಧನ

ಐದು ಕೋಟಿ ರೂ. ಹಣಕ್ಕಾಗಿ ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಸತೀಶ್ ಜಾರಕಿಹೊಳಿ ಆಪ್ತೆಯನ್ನು ಘಟಪ್ರಭಾ ಪೊಲೀಸರು ಅರೆಸ್ಟ್‌ ಮಾಡಿದ್ದಾರೆ. ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಉದ್ಯಮಿ ಬಸವರಾಜ ಅಂಬಿ ಅವರನ್ನು ಫೆ.14ರಂದು ಆರೋಪಿಗಳು ಅಪಹರಿಸಿ

ಕಂಡಕ್ಟರ್ ಮೇಲೆ ಹಲ್ಲೆ ಅತ್ಯಂತ ಖಂಡನೀಯ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಸೂಚನೆ

ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕೆಎಸ್ಸಾರ್ಟಿಸಿ ಕಂಡಕ್ಟರ್‌ ಮೇಲೆ ಹಲ್ಲೆಕೋರರ ವಿರುದ್ಧ ಗೂಂಡಾ ಕಾಯ್ದೆ: ಸಚಿವ ರಾಮಲಿಂಗಾ ರೆಡ್ಡಿ ತಾಕೀತು

ಬೆಳಗಾವಿಯಲ್ಲಿ ಕರ್ನಾಟಕದ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದವರ ವಿರುದ್ಧ ಗೂಂಡಾ ಕಾಯ್ದೆ ಹಾಕ್ಬೇಕು ಎಂದು ಸಚಿವ ರಾಮಲಿಂಗಾ ರೆಡ್ಡಿ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಕನ್ನಡದಲ್ಲಿ ಮಾತನಾಡಿ ಎಂದ ವಿಚಾರಕ್ಕೆ ದುಷ್ಕರ್ಮಿಗಳು ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದ ಹಿನ್ನೆಲೆಯಲ್ಲಿ ಬೆಳಗಾವಿಗೆ ಭೇಟಿ