Menu

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಮಹಿಳೆ?

ಮೂರು ರಾಜ್ಯಗಳ ಚುನಾವಣೆ ನಂತರ ದೆಹಲಿಗೆ ಮಹಿಳಾ ಸಿಎಂ ಆಗಿ ಆಯ್ಕೆ ಮಾಡಿದ ಬಿಜೆಪಿ ಇದೀಗ ಬಿಜೆಪಿ ರಾಷ್ಟ್ರಾಧ್ಯಕ್ಷ ಸ್ಥಾನಕ್ಕೆ ಮಹಿಳೆಯನ್ನು ನೇಮಕ ಮಾಡಲು ಚಿಂತನೆ ನಡೆದಿದೆ. ಒಂದು ವೇಳೆ ಇದು ಸಾಧ್ಯವಾದರೆ ಬಿಜೆಪಿ ಇತಿಹಾಸದಲ್ಲೇ ಮೊದಲ ಬಾರಿ ರಾಷ್ಟ್ರಾಧ್ಯಕ್ಷೆ ನೇಮಕದ ಮೂಲಕ ಇತಿಹಾಸ ನಿರ್ಮಾಣವಾಗಲಿದೆ. ಬಿಜೆಪಿ ರಾಷ್ಟ್ರಾಧ್ಯಕ್ಷ ಜೆಪಿ ನಡ್ಡಾ ಅವರ ಅಧಿಕಾರಾವಧಿ ಪೂರ್ಣಗೊಂಡಿದ್ದು, 2019ಕ್ಕೆ ಅವಧಿ ಮುಕ್ತಾಯವಾಗಿದ್ದರೂ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಧಿಕಾರ ಅವಧಿ ವಿಸ್ತರಣೆ ಮಾಡಲಾಗಿತ್ತು.

ಮುಸ್ಲಿಂ ಮೀಸಲಾತಿಯನ್ನು ಬಾಬಾ ಸಾಹೇಬ್‌ ಅಂಬೇಡ್ಕರರೇ ವಿರೋಧಿಸಿದ್ದರು: ಆರ್‌.ಅಶೋಕ

ಬೆಂಗಳೂರು: ಈ ಅಧಿವೇಶನದಲ್ಲಿ ಅನೇಕ ಸಮಸ್ಯೆಗಳ ಬಗ್ಗೆ ಬಿಜೆಪಿ ಬೆಳಕು ಚೆಲ್ಲಿದೆ. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್‌ ಸರ್ಕಾರ ಯಾವುದಕ್ಕೂ ಸರಿಯಾದ ಉತ್ತರ ನೀಡಿಲ್ಲ. ಪ್ರತಿಭಟನೆ ಮಾಡಿರುವುದಕ್ಕೆ ಶಾಸಕರನ್ನೇ ಅಮಾನತು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗೋಷ್ಠಿಯಲ್ಲಿ

ಬಿಜೆಪಿಯಿಂದ ಅಪಪ್ರಚಾರ, ನನ್ನ ಹೇಳಿಕೆ ತಿರುಚಿರುವವರ ವಿರುದ್ಧ ಕಾನೂನು ಹೋರಾಟ: ಡಿ.ಕೆ.ಶಿವಕುಮಾರ್

“ಸಂವಿಧಾನ ಬದಲಾವಣೆ ಮಾಡುವುದಾಗಿ ನಾನು ಎಲ್ಲಿಯೂ ಹೇಳಿಲ್ಲ. ನನ್ನ ಹೇಳಿಕೆಯನ್ನು ತಿರುಚಿ ಬಿಜೆಪಿ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿದೆ. ಇದರ ವಿರುದ್ಧ ಕಾನೂನು ಹೋರಾಟ ಮಾಡುವೆ ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ

ಬಿಜೆಪಿ ಶಾಸಕರ ಒಟ್ಟು ಆಸ್ತಿ 26,000 ಕೋಟಿ ರೂ.: 3 ರಾಜ್ಯಗಳ ಬಜೆಟ್ ಮೀರಿದ ಸಂಪತ್ತು!

ನವದೆಹಲಿ: ದೇಶಾದ್ಯಂತ ಬಿಜೆಪಿ ಶಾಸಕರ ಆಸ್ತಿಯು ಮೂರು ರಾಜ್ಯಗಳ ವಾರ್ಷಿಕ ಬಜೆಟ್‌ಗಿಂತ ಹೆಚ್ಚಿರುವ ಆಘಾತಕಾರಿ ಅಂಶ ಬಯಲಾಗಿದೆ. ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ (ಎಡಿಆರ್) ಬಿಡುಗಡೆ ಮಾಡಿದ ವರದಿಯಲ್ಲಿ ದೇಶಾದ್ಯಂತ ಶಾಸಕರ ಆಸ್ತಿ ವಿವರ ಬಹುರಂಗವಾಗಿದೆ. ಮುಂಬೈನ ಘಾಟ್ಕೋಪರ್ ಪೂರ್ವವನ್ನು ಪ್ರತಿನಿಧಿಸುವ

ಮುಂದಿನ ಚುನಾವಣೆಯಲ್ಲಿ ಬಿಜೆಪಿ ಧೂಳೀಪಟ ಮಾಡ್ತೀವಿ: ಸಿಎಂ ಸಿದ್ದರಾಮಯ್ಯ

ಕರ್ನಾಟಕದ ಇತಿಹಾಸವನ್ನು ಅವಲೋಕಿಸಿದರೆ, ಬಿಜೆಪಿಯನ್ನು ಜನರು ಆಶೀರ್ವಾದವೇ ಮಾಡಿಲ್ಲ. ಕಳೆದ ಬಾರಿ ಕಾಂಗ್ರೆಸ್ ಕಡಿಮೆ ಸ್ಥಾನ ಗೆದ್ದಿದ್ದರೂ, ಈ ಬಾರಿ ಬಹುಮತ ಸಾಧಿಸಿದ್ದೇವೆ, ಮುಂದಿನ ಬಾರಿ ಬಿಜೆಪಿಯವರನ್ನು ಧೂಳಿಪಟ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸಭೆಯಲ್ಲಿ ಬಜೆಟ್ ಮೇಲಿನ ಚರ್ಚೆಯ

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕರಿಮಣಿ ಮಾಲೀಕ ಯಾರು ಎನ್ನುವುದು ಕೀಳು ಅಭಿರುಚಿಯ ಪ್ರಯೋಗ

ಅಧಿಕಾರಕ್ಕಾಗಿ ಅಧಿಕಾರ ಮಾಡುವುದಲ್ಲ. ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆಯಾಗಬೇಕು ಎನ್ನುವ ಕಾಳಜಿಯ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇವೆಲ್ಲವೂ ವಾಸ್ತವ ಕಾರ್ಯಕ್ರಮಗಳಾಗಿರುವುದರಿಂದ ರಾಜ್ಯಪಾಲರು ಶ್ಲಾಘಿಸಿದ್ದಾರೆ. ಸದನದ ಚರ್ಚೆಗಳು ಬಸವಣ್ಣ ಹೇಳಿದಂತೆ ನುಡಿದರೆ ಮುತ್ತಿನ ಹಾರದಂತಿರಬೇಕು, ನುಡಿದರೆ ಲಿಂಗ ಮೆಚ್ಚಿ ಅಹುದಹುದೆನ್ನುವಂತಿರಬೇಕು. ಸದನದಲ್ಲಿ ಮಾತನಾಡಿದರೆ

ಅಲ್ಪಸಂಖ್ಯಾತರಿಗೆ ಅವಕಾಶ ನೀಡಿ ಸಮಬಾಳು ಸಮಪಾಲು ಎನ್ನಲಿ: ವಿಜಯೇಂದ್ರಗೆ ಡಿ.ಕೆ.ಶಿವಕುಮಾರ್ ಸವಾಲು

“ಸಮಬಾಳು ಸಮಪಾಲು ಎನ್ನುವ ವಿಜೆಯೇಂದ್ರ ಅವರು ಅಲ್ಪಸಂಖ್ಯಾತರಲ್ಲಿ ಯಾರಾದರೊಬ್ಬರನ್ನು ಎಂಎಲ್‌ಸಿ, ರಾಜ್ಯಸಭಾ ಸದ್ಯಸರನ್ನಾಗಿ ಕೇಂದ್ರ ಸಂಪುಟದಲ್ಲಿ ಮಂತ್ರಿ ಮಾಡಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್  ತಿರುಗೇಟು ನೀಡಿದರು. ಗದಗದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್‌ ಪ್ರತಿಕ್ರಿಯೆ ನೀಡಿ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಎಕ್ಸ್ (ಟ್ವೀಟ್)

ತೆರಿಗೆ ಹಣ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ: ಆರ್‌. ಅಶೋಕ್‌

ರಾಜ್ಯದ ಜನರ ತೆರಿಗೆ ಹಣವನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರ ಜೇಬಿಗೆ ಹಾಕಲಾಗುತ್ತಿದೆ. ಪ್ರತಿ ವರ್ಷ 15 ರಿಂದ 20 ಕೋಟಿ ರೂ. ಲೂಟಿ ಮಾಡಿ ಕಾಂಗ್ರೆಸ್‌ ಕಾರ್ಯಕರ್ತರಿಗೆ ನೀಡಲಾಗುತ್ತಿದೆ. ಇದನ್ನು ಖಂಡಿಸಿ ಅಧಿವೇಶನದಲ್ಲಿ ಹಾಗೂ ಹೊರಗೆ ಪ್ರತಿಭಟನೆ

ಧರ್ಮ ಧರ್ಮಗಳ ವಿಭಜನೆಯ ದುಸ್ಸಾಹಸ: ವಿಜಯೇಂದ್ರ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರನ್ನು ತೃಪ್ತಿ ಪಡಿಸಲು ಹೋಗಿ ಧರ್ಮ ಧರ್ಮಗಳ ನಡುವೆ ವಿಭಜನೆ ಮಾಡುವ ದುಸ್ಸಾಹಸಕ್ಕೆ ಕೈ ಹಾಕಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”

ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ: ಡಿ.ಕೆ. ಶಿವಕುಮಾರ್

“ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?” ಎಂದು ಡಿಸಿಎಂ ಶಿವಕುಮಾರ್‌  ತಿರುಗೇಟು ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್  ಪ್ರತಿಕ್ರಿಯೆ ನೀಡಿದರು.  ಬಿಜೆಪಿಯವರು