bjp
ಸಿಎಂ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ: ಆರ್.ಅಶೋಕ
ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಾಯುಕ್ತ ಮತ್ತು ಇಡಿ ತನಿಖೆ ನಡೆಯುತ್ತಿದ್ದು, ಸದ್ಯಕ್ಕೆ ಸಿದ್ದರಾಮಯ್ಯನವರಿಗೂ ಸ್ವಲ್ಪ ರಿಲೀಫ್ ಸಿಕ್ಕಿದೆ. ಅಲ್ಲದೇ ಲೂಟಿಯಾಗಿರುವ ರಾಜ್ಯದ ಜನತೆಯ ದುಡ್ಡು ಮತ್ತೆ ಖಜಾನೆಗೆ ವಾಪಸ್ ಬರುತ್ತದೆ ಎಂಬ ವಿಶ್ವಾಸ ಇದೆ. ಹೈಕೋರ್ಟ್ ಆದೇಶವನ್ನು ನಾವು ಒಪ್ಪಲೇಬೇಕಾಗುತ್ತದೆ. ಸಿದ್ದರಾಮಯ್ಯ ವಿಚಾರದಲ್ಲಿ ಕಾನೂನು ಹೋರಾಟ
ಇಷ್ಟೊಂದು ಭಿನ್ನಾಭಿಪ್ರಾಯ ಇದೆ ಅಂತ ಗೊತ್ತಿರಲಿಲ್ಲ: ವಿಜಯೇಂದ್ರ
ಪಕ್ಷಕ್ಕಾಗಿ ಹಗಲಿರುಳು ದುಡಿದು ಪಕ್ಷವನ್ನು ಕಟ್ಟಿದ ಯಡಿಯೂರಪ್ಪ ಅವರನ್ನು ತೇಜೋವಧೆ ಮಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಗುಡುಗಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ತುರ್ತು ಸುದ್ದಿಗೋಷ್ಠಿ ನಡೆಸಿದ ಅವರು ನನ್ನ ವಿರುದ್ಧ ಬಂಡಾಯ ಘೋಷಿಸಿರುವ ಮುಖಂಡರು ಹೈಕಮಾಂಡ್ ಭೇಟಿ
ಬ್ಯಾಂಕ್ ಗೆ 7.17 ಕೋಟಿ ವಂಚಿಸಿದ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ದೋಷಿ: ಕೋರ್ಟ್ ಮಹತ್ವದ ತೀರ್ಪು
ಬಿಜೆಪಿಯ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಸೇರಿದಂತೆ ನಾಲ್ವರು ಬ್ಯಾಂಕ್ ವಂಚನೆ ಪ್ರಕರಣದಲ್ಲಿ ದೋಷಿಗಳು ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತೀರ್ಪು ಪ್ರಕಟಿಸಿದೆ. ನ್ಯಾಯಮೂರ್ತಿ ನ್ಯಾ.ಸಂತೋಷ್ ಗಜಾನನ ಭಟ್ ಅವರನ್ನೊಳಗೊಂಡ ಪೀಠ ಗುರುವಾರ ಕೃಷ್ಣಯ್ಯ ಶೆಟ್ಟಿ, ಎಂಟಿವಿ ರೆಡ್ಡಿ, ಮುನಿರಾಜು, ಶ್ರೀನಿವಾಸ
ದೆಹಲಿ ವಿಧಾನಸಭಾ ಚುನಾವಣೆ: ಶೇ.57.70 ಮತದಾನ
ರಾಷ್ಟ್ರ ರಾಜಧಾನಿ ದೆಹಲಿ ವಿಧಾನಸಭಾ ಚುನಾವಣೆಯ ಮತದಾನ ಮಧ್ಯಾಹ್ನದ ನಂತರ ಚುರುಕುಗೊಂಡಿದ್ದು, ಮಧ್ಯಾಹ್ನ 5 ಗಂಟೆ ವೇಳೆಗೆ 57.70ರಷ್ಟು ಮತದಾನ ದಾಖಲಾಗಿದೆ. ದೆಹಲಿಯಲ್ಲಿ ಮಧ್ಯಾಹ್ನ 11 ಗಂಟೆಯವರೆಗೂ ನಿಧಾನಗತಿಯಲ್ಲಿ ನಡೆದ ಮತದಾನ ಮಧ್ಯಾಹ್ನದ ನಂತರ ಚುರುಕುಗೊಂಡಿದ್ದು, ಸಂಜೆ ವೇಳೆಗೆ ಉತ್ತಮ ಮತದಾನ
ರಾಜ್ಯಾಧ್ಯಕ್ಷ ಹುದ್ದೆಗೆ ಅರ್ಜಿ ಹಾಕಿಲ್ಲ: ಆರ್.ಅಶೋಕ ಸ್ಪಷ್ಟನೆ
ಬೆಂಗಳೂರು: ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಹೋರಾಟ ಮಾಡುತ್ತಿದ್ದೇನೆಯೇ ಹೊರತು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಾನೆಂದೂ ಅರ್ಜಿ ಹಾಕಿಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಸ್ಪಷ್ಟಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ವಿರೋಧ ಪಕ್ಷದ ನಾಯಕನಾಗಿ ಸರ್ಕಾರದ ಜನವಿರೋಧಿ ನೀತಿಗಳ
ನಮ್ಮ ಹೋರಾಟಕ್ಕೆ ಜಯ ಸಿಗಲಿದೆ: ಮಾಜಿ ಸಂಸದ ಜಿ. ಸಿದ್ದೇಶ್ವರ
ಶೀಘ್ರದಲ್ಲೇ ಹೈಕಮಾಂಡ್ ಒಳ್ಳೆಯ ಸುದ್ದಿ ಕೊಡಲಿದ್ದಾರೆ. ನಮ್ಮ ಹೋರಾಟಕ್ಕೆ ಜಯ ಸಿಗಲಿದೆ ಎಂದು ಮಾಜಿ ಸಂಸದ ಜಿ.ಸಿದ್ದೇಶ್ವರ್ ಹೇಳಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ವಿರುದ್ಧ ಬಂಡಾಯ ಘೋಷಿಸಿರುವ ಭಿನ್ನಮತೀಯರ ಗುಂಪು ಇಂದು ದೆಹಲಿಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಸೇರಿದಂತೆ
ಧರ್ಮ, ಧಾರ್ಮಿಕ ನಂಬಿಕೆ, ಆಚರಣೆಗಳಲ್ಲಿ ಬಿಜೆಪಿ ರಾಜಕೀಯ ಹುಡುಕುತ್ತಿದೆ: ಡಿಕೆ ಶಿವಕುಮಾರ್
“ಯಾವುದೇ ಧರ್ಮದ ಬಗ್ಗೆ ಶ್ರದ್ದೆ, ಆಚರಣೆ, ನಂಬಿಕೆಗಳು ಆಯಾಯ ವ್ಯಕ್ತಿಗೆ ಸಂಬಂಧಿಸಿದ ವಿಚಾರಗಳು. ನಾವು ಪ್ರತಿಯೊಂದಕ್ಕೂ ಗೌರವ ನೀಡಬೇಕು. ಆದರೆ ಇವುಗಳನ್ನು ಬಿಜೆಪಿ ತನ್ನ ರಾಜಕೀಯ ಉದ್ದೇಶಗಳಿಗೆ ಬಳಸಿಕೊಳ್ಳುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ ಉನ್ನತ ಶಿಕ್ಷಣ ಸಚಿವರ
ಬಿಜೆಪಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ: ಬಿವೈ ವಿಜಯೇಂದ್ರ
ಶಿವಮೊಗ್ಗ: ಭಾರತೀಯ ಜನತಾ ಪಾರ್ಟಿಯಲ್ಲಿ ಆಂತರಿಕ ಪ್ರಜಾಪ್ರಭುತ್ವ ಇದೆ. ಯಾವುದೇ ರಾಜಕೀಯ ಪಕ್ಷದಲ್ಲಿ ಇಷ್ಟೊಂದು ವ್ಯವಸ್ಥಿತವಾಗಿ ಸಂಘಟನಾ ಚುನಾವಣೆ ನಡೆಯುತ್ತದೆ ಅಂದರೆ ಅದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಮಂಡಲ ಮಟ್ಟದಿಂದ ಹಿಡಿದು ಜಿಲ್ಲಾ ಮಟ್ಟ, ರಾಜ್ಯ ಅಧ್ಯಕ್ಷರ ಚುನಾವಣೆ ಮತ್ತು ರಾಷ್ಟ್ರೀಯ
ಕಾಂಗ್ರೆಸ್ಸಿಂದ ಹೋದವರನ್ನು ಬಿಜೆಪಿ ಯೂಸ್ ಅಂಡ್ ಥ್ರೋ ಮಾಡಿದೆ: ಡಿಕೆ ಶಿವಕುಮಾರ್
ಶಿವಮೊಗ್ಗ: ಕಾಂಗ್ರೆಸ್‌ನಿಂದ ಹೋದವರನ್ನು ಬಿಜೆಪಿಯವರು ಯೂಸ್ ಅಂಡ್ ಥ್ರೋ ರೀತಿ ನೋಡಿಕೊಳ್ಳುತ್ತಿದ್ದಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷವು ಬೇರೆ ಪಕ್ಷಗಳಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಮೇಲೆ ಅವಲಂಬಿತವಾಗಿ ಸರ್ಕಾರ ನಡೆಸುತ್ತಿಲ್ಲ. ತಮ್ಮ ಪಕ್ಷದ
ನಿರುದ್ಯೋಗ, ಹಣದುಬ್ಬರ ಬಿಜೆಪಿಯ ಕೊಡುಗೆ: ಕಾಂಗ್ರಸ್ ವಾಸ್ತವಿಕ ವರದಿ
ನವದೆಹಲಿ: ಶನಿವಾರ ಮಂಡನೆಯಾಗಲಿರುವ ಬಜೆಟ್‌ಗೆ ಮುನ್ನ ದೇಶದ ಆರ್ಥಿಕ ಪರಿಸ್ಥಿತಿಯನ್ನು ವಿವರಿಸುವ ವಾಸ್ತವದ ವರದಿಯನ್ನು ಕಾಂಗ್ರೆಸ್ ಪಕ್ಷವು ಬಿಡುಗಡೆ ಮಾಡಿದೆ. ದೇಶದಲ್ಲಿ ನಿರುದ್ಯೋಗ, ಹಣದುಬ್ಬರ ಹೆಚ್ಚಳ, ಹೆಚ್ಚಳವಾಗದ ವೇತನ ಹಾಗೂ ಭಾರಿ ಆರ್ಥಿಕ ಅಸಮಾನತೆ ಇದೆ ಎಂದು ಕಾಂಗ್ರೆಸ್ ಕಿಡಿ ಕಾರಿದೆ.